ಶಾಸಕಾಂಗ ಕಾರ್ಯದರ್ಶಿಯಾಗಿ ಇ.ತುಕಾರಾಂ ನೇಮಕ

ಬಳ್ಳಾರಿ:  ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕ ಇ.ತುಕಾರಾಂ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. 

ಸಿದ್ದರಾಮಯ್ಯನವರ ಬಣದಲ್ಲಿ ಗುರುತಿಸಿಕೊಂಡಿದ್ದ ಶಾಸಕ ಇ.ತುಕಾರಾಂ ಅವರು ಸತತ ನಾಲ್ಕು ಬಾರಿ ಸಂಡೂರು ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಸಂಡೂರು ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆಯನ್ನಾಗಿಸಿಕೊಂಡಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಚಿವ ಸ್ಥಾನ ಸಿಗಬಹುದು ಎಂಬ ಮಾತುಗಳು ಕೇಳಿ ಬಂದಿದ್ದವು.

 

ಆದರೆ ಅವರ ರಾಜಕೀಯ ಗುರುಗಳಾದ ಕಲಘಟಗಿ ಕ್ಷೇತ್ರದಿಂದ ಗೆದ್ದ ಸಂತೋಷ್ ಲಾಡ್ ಅವರಿಗೆ ಸಚಿವ ಸ್ಥಾನ ನೀಡಿದ್ದರಿಂದ ಈ ಬಾರಿ ಶಾಸಕ ತುಕಾರಾಂ ಅವರಿಗೆ, ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. 

ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಮೈತ್ರಿ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ, ಕೆಲವೇ ತಿಂಗಳುಗಳ ಕಾಲ ಕಾರ್ಯ ನಿರ್ವಹಿಸಿದ್ದರು. 

Facebook
Twitter
LinkedIn
Pinterest
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top