ಪರಿಸರ ಸ್ನೇಹಿ ಸಾರಿಗೆ ನೀತಿ 2025-30 ಬಿಡುಗಡೆ: 50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

Kannada Nadu
ಪರಿಸರ ಸ್ನೇಹಿ ಸಾರಿಗೆ ನೀತಿ 2025-30 ಬಿಡುಗಡೆ: 50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

ಬೆಂಗಳೂರು: ವಿದ್ಯುತ್ ಮತ್ತು ಹೈಡ್ರೋಜನ್ ಚಾಲಿತ ವಾಹನ ತಯಾರಿಕೆ ವಲಯಕ್ಕೆ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಆಕರ್ಷಿಸಿ, 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿರುವ ಮುಂದಿನ ಐದು ವರ್ಷಗಳ ಅವಧಿಯ ಪರಿಸರಸ್ನೇಹಿ ಸಾರಿಗೆ ನೀತಿಯನ್ನು ಇಂಧನ ಸಚಿವ ಕೆ ಜೆ ಜಾರ್ಜ್ ಬಿಡುಗಡೆ ಮಾಡಿದರು.
ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಹೊಸ ನೀತಿ ಅನಾವರಣಗೊಂಡಿತು.

ನೀತಿಯ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ, ಇದಕ್ಕಾಗಿ ಗೌರಿಬಿದನೂರು, ಧಾರವಾಡ ಮ್ತತು ಹಾರೋಹಳ್ಳಿಯಲ್ಲಿ ಪರಿಸರಸ್ನೇಹಿ ಇಂಧನ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ದೇಶದ ಇ.ವಿ.ವಲಯದಲ್ಲಿ ರಾಜ್ಯವು 3ನೇ ಸ್ಥಾನದಲ್ಲಿದ್ದು, ನಮ್ಮಲ್ಲಿ 2.50 ಲಕ್ಷ ಇ.ವಿ.ಚಾಲಿತ ವಾಹನಗಳಿವೆ. ಬ್ಯಾಟರಿ ಪ್ಯಾಕ್, ಕೋಶಗಳ ತಯಾರಿಕೆ, ಬಿಡಿಭಾಗಗಳ ಉತ್ಪಾದನೆ, ಒಇಎಂ, ಚಾರ್ಜಿಂಗ್, ಪರೀಕ್ಷಾರ್ಥ ಮೂಲಸೌಕರ್ಯ ಹಾಗೂ ಆರ್ & ಡಿ ಇವುಗಳಿಗೆ ಈಗಾಗಲೇ 25 ಸಾವಿರ ಕೋಟಿ ರೂ. ಬಂದಿದೆ. ಹೊಸ ನೀತಿಯಲ್ಲಿ ಚಾರ್ಜಿಂಗ್ ಮೂಲಸೌಕರ್ಯ ಮತ್ತು ಹೈಡ್ರೋಜನ್ ಕೇಂದ್ರಗಳ ಜಾಲದ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಜೊತೆಗೆ ಈಗ ಓಡಾಡುತ್ತಿರುವ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನಗಳ ರೆಟ್ರೋ-ಫಿಟ್ಟಿಂಗ್ ಪ್ರೋತ್ಸಾಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಎಂಟಿಸಿ ವ್ಯಾಪ್ತಿಯ ಹೊರಗೆ ಕಡಿಮೆ ದೂರದಲ್ಲಿರುವ ಸೇವೆಗಳಿಗೆ ಇ.ವಿ. ಬಸ್ ಸೇವೆಗಳನ್ನು ಹೆಚ್ಚಿಸಲಾಗುವುದು. ಜತೆಗೆ ಇ-ಕಾಮರ್ಸ್ ಮತ್ತು ವಿತರಣಾ ಕಂಪನಿಗಳು ತಮ್ಮ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು 2030ರ ವೇಳೆಗೆ ಇ.ವಿ/ಹೈಡ್ರೋಜನ್ ಚಾಲಿತವಾಗಿ ಬದಲಿಸಿಕೊಳ್ಳಲು ಒತ್ತು ಕೊಡಲಾಗಿದೆ. ಅಲ್ಲದೆ ನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಘನತ್ಯಾಜ್ಯ ನಿರ್ವಹಣೆಗೆ ಇರುವ ವಾಹನಗಳನ್ನು ಕೂಡ ರೂಪಾಂತರಿಸಿ ಕೊಳ್ಳುವಂತೆ ಮಾಡಲಾಗುವುದು. ಖಾಸಗಿ ಕಂಪನಿಗಳು ಮತ್ತು ಶಾಲಾವಾಹನಗಳಿಗೂ ಇದನ್ನು ಅನ್ವಯಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";