ಬೆಂಗಳೂರು: ಕೆಲವು ಜಿಲ್ಲೆಗಳಲ್ಲಿ ಕೋವಿಡ್-೧೯ನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಪರಿಸ್ಥಿತಿ ನಿಯಂತ್ರಣದ ಬಗ್ಗೆ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಇಂದು ಚರ್ಚಿಸಲು ತುರ್ತು ಸಭೆ ನಡೆಯಲಿದೆ. ಸುದ್ದಿಗಾರರೊಂದಿಗೆ ಶನಿವಾರ ಬೆಳಿಗ್ಗೆ ಮಾತನಾಡಿದ ಸಿಎಂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋರೋನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ನೆರೆಯ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ. ಕೆಲವು ದೆಶಗಳಲ್ಲಿ ಕೊರೊನಾ ವೈರಸ್‌ನ ಹೊಸ ತಳಿ ಕಂಡುಬಂದಿದೆ. ಈ ಎಲ್ಲ ವಿಷಯಗಳ ಬಗ್ಗೆಯೂ ಚರ್ಚಿಸಿ, ಕೋರೋನ ನಿಯಂತ್ರಣದ ಬಗ್ಗೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಆರೋಗ್ಯ ಇಲಾಖೆ, ವಿಪತ್ತು ನಿರ್ವಹಣಾ ಇಲಾಖೆಗಳ ಅಧಿಕಾರಿಗಳು, ಕೋವಿಡ್ ಸಲಹಾ ಸಮಿತಿ ಸದಸ್ಯರು, ತಾಂತ್ರಿಕ ಸಲಹಾ ಸಮಿತಿ ತಜ್ಞರು ಸಭೆಯಲ್ಲಿ ಭಾಗವಹಿಸಲಿದ್ದು ಅವರೆಲ್ಲರ ಜತೆಗೆ ಚರ್ಚಿಸಿದ ಬಳಿಕ ನಿಯಂತ್ರಣ ಕ್ರಮಗಳನ್ನು ಪ್ರಕಟಿಸಲಾಗುವುದು ಎಂದು ಸಿಎಂ ತಿಳಿಸಿದರು.