• ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ. 3.9 ಲಕ್ಷ ಮಹಿಳೆಯರಿಗೆ ಅನುಕೂಲ.
• ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ.
• ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಪ್ಯಾಕಿಂಗ್ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು “ಅಸ್ಮಿತೆ” ಹೆಸರಿನಡಿ ಎಲ್ಲಾ ಉತ್ಪನ್ನಗಳ ಮಾರಾಟ; ಹೋಬಳಿ/ ಜಿಲ್ಲೆ/ ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ ಆಯೋಜನೆ.
• ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ – ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರುನ ಲ್ಲಿ ಸೀರೆ ಮೈಕ್ರೋಕ್ಲಸ್ಟರ್ ಅಭಿವೃದ್ಧಿ.