ರಾಜ್ಯ ಬರದಿಂದ ಕೆಂಗೆಟ್ಟರೂ ಕೇಂದ್ರದಿಂದ ನಯಾಪೈಸೆ ಹಣ ಬಿಡುಗಡೆ ಆಗಿಲ್ಲ

ಬೆಂಗಳೂರು: ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಆದರೂ ಇದುವರೆಗೆ ಕೇಂದ್ರದಿಂದ ನಯಾಪೈಸೆ ಹಣ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರೇ ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆಎಂದು ಪ್ರಶ್ನಿಸಿದ್ದಾರೆ.

 

ನಿಮ್ಮ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?. ಇದು ನನ್ನ ಪ್ರಶ್ನೆ ಮಾತ್ರವಲ್ಲನಾಡಿನ ಆರೂವರೆ ಕೋಟಿ ಸ್ವಾಭಿಮಾನಿ_ಕನ್ನಡಿಗರಪ್ರಶ್ನೆಯಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಕನ್ನಡಿಗರಿಗೆ ಬೆದರಿಕೆ ಹಾಕಿದ್ದರು. ಈಗ ಅದರ ಫಲಿತಾಂಶವನ್ನು ನಾವು ನೋಡುತ್ತಿದ್ದೇವೆ. ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಮತ್ತು ಕೇಂದ್ರ ಸಚಿವರು ಏಕೆ ಮೌನವಾಗಿದ್ದಾರೆ?. ಇದಕ್ಕೆ ಕನ್ನಡಿಗರ ಮೇಲಿನ ದ್ವೇಷ ಕಾರಣವೇಎಂದು ಸಿಎಂ ಪ್ರಶ್ನಿಸಿದ್ದಾರೆ.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top