ಇದೇ ತಿಂಗಳು ಎವಿಡೆನ್ಸ್ ಟೀಸರ್

ಶ್ರೀಧೃತಿ ಪ್ರೊಡಕ್ಷನ್ ಲಾಂಛನದಲ್ಲಿ ಡಾ.ಕೊಡ್ಲಾಡಿ ಸುರೇಂದ್ರಶೆಟ್ಟಿ ಅವರು ಅರ್ಪಿಸಿ, ಶ್ರೀನಿವಾಸ್‌ಪ್ರಭು,  ಕೆ.ಮಾದೇಶ್ ಹಾಗೂ  ನಟರಾಜ್ ಸಿ ಎಸ್  ನಿರ್ಮಿಸುತ್ತಿರುವ ‘ಎವಿಡೆನ್ಸ್’ ಚಿತ್ರಕ್ಕೆ ಪ್ರವೀಣ್ ರಾಮಕೃಷ್ಣ ಆಕ್ಷನ್‌ ಕಟ್ ಹೇಳಿದ್ದಾರೆ. ಇದೇ ತಿಂಗಳ ಅಂತ್ಯದಲ್ಲಿ ಚಿತ್ರದ ಟೀಸರ್ ಬಿಡುಗಡೆ ಮಾಡುವ  ಯೋಜಿಸಿದೆ. ಅಲ್ಲದೆ ಚಿತ್ರವನ್ನು ಆಗಸ್ಟ್ ವೇಳೆಗೆ ರಿಲೀಸ್ ಮಾಡಲು ಪ್ಲಾನ್ ಕೂಡ ಮಾಡಿದೆ. ಕೊಲೆಯೊಂದು ನಡೆದಾಗ ಅದರ ಸಾಕ್ಷಾಧಾರಗಳನ್ನು  ಹುಡುಕುವ ಪ್ರಕ್ರಿಯೆ ಸುತ್ತ ನಡೆಯುವ ಕ್ರೈಮ್, ಸಸ್ಪೆನ್ಸ್ , ಥ್ರಿಲ್ಲರ್ ಜೊತೆಗೆ ತ್ರಿಕೋನ ಪ್ರೇಮಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರವೀಣ್ ರಾಮಕೃಷ್ಣ  ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.

ಜೋಶ್ ಖ್ಯಾತಿಯ ರೋಬೊ ಗಣೇಶನ್ ಚಿತ್ರದ ನಾಯಕನಾಗಿ ನಟಿಸಿದ್ದು, ಕಿರಗೂರಿನ ಗಯ್ಯಾಳಿಗಳು ಖ್ಯಾತಿಯ ಮಾನಸ ಜೋಶಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.  ಆಕರ್ಷ್ ಆದಿತ್ಯ, ರಚಿತಾ, ಪೂಜಿತ ಬೋಬೆಗೌಡ, ಚಮಕ್‌ಚಂದ್ರ, ಪವನ್‌ಸುರೇಶ್, ಶಶಿಧರಕೋಟೆ, ಕಾರ್ತಿಕ್ ವರ್ಣೇಕರ್, ಮನಮೋಹನ್ ರೈ, ರೇಣು ಶಿಕಾರಿ, ಆರಾಧ್ಯ ಶಿವಕುಮಾರ್ ಮುಂತಾದವರು ನಟಿಸಿದ್ದಾರೆ. ಅರವಿಂದ್ ಅಚ್ಚು, ಎಂ.ಎನ್.ರವೀಂದ್ರ ರಾವ್ , ಪ್ರಶಾಂತ್ ಸಿ.ಪಿ. ರಮೇಶ್ ಕೆ, ಕಿಶೋರ್‌ಬಾಬು ಮತ್ತು ನರಸಿಂಹಮೂರ್ತಿ ಚಿತ್ರದ ಸಹ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ.  

Facebook
Twitter
LinkedIn
WhatsApp
Telegram

Leave a Comment

Your email address will not be published. Required fields are marked *

Translate »
Scroll to Top