ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ಬಳ್ಳಾರಿ: ರಾಜ್ಯದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ 94 ಕೋಟಿ ರೂ ಹಣದ ಅಕ್ರಮ ವರ್ಗಾವಣೆ  ಹಗರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಮಾಜಿ ಸಚಿವ, ಗ್ರಾಮಿಣ ಶಾಸಕ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.

 

 ನಾಗೇಂದ್ರ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿಯೇ ವಶಕ್ಕೆ ಪಡೆದ ಅಧಿಕಾರಿಗಳು ಬೆಂಗಳೂರಿನ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. 

ಕಳೆದ ಎರೆಡು ದಿನಗಳ ಹಿಂದೆ  ನಾಗೇಂದ್ರ ಅವರ ಬಳ್ಳಾರಿ ಮತ್ತು ಬೆಂಗಳೂರಿನ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ಬರೋಬ್ಬರಿ ಎರಡು ದಿನಗಳ ಕಾಲ ದಾಳಿ, ಶೋಧ ಕಾರ್ಯ ನಡೆದಿತ್ತು. ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಹಾಗೂ ಬೇನಾಮಿ ಆಸ್ತಿಯ ಮಹತ್ವದ ದಾಖಲೆಗಳು ಲಭ್ಯವಾದ ಹಿನ್ನೆಲೆಯಲ್ಲಿ ಅವರನ್ನು ಇಡಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ.

ನಾಗೇಂದ್ರ ಅಷ್ಟೇ ಅಲ್ಲದೇ ಅವರ ಆಪ್ತರು, ಕೆಲ ಸಂಬಂಧಿಕರಿಗೂ ನೋಟಿಸ್ ನೀಡಿ ವಿಚಾರಣೆಗೆ ಕರೆಯಲಾಗಿದೆಯಂತೆ.

 

 ಹಗರಣದ ಆರೋಪ ಹೊತ್ತಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲರ ಮೇಲೂ ಇಡಿ ಅಧಿಕಾರಿಗಳು ನಿಗಾ ಇಟ್ಟಿದ್ದು ಯಾವುದೇ ಕ್ಷಣದಲ್ಲಿ ಅವರನ್ನೂ ವಶಕ್ಕೆ ಪಡೆಯಬಹುದು ಎನ್ನಲಾಗುತ್ತಿದೆ.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top