ಬೆಂಗಳೂರು: ಬೆಂಬಲ ಬೆಲೆ ಯೋಜನೆಯಲ್ಲಿ ಶೇಂಗಾ ಸೇರಿದಂತೆ ಹಲವು ಕೃಷಿ ಉತ್ಪನ್ನಗಳ ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಶೇಂಗಾ ಮತ್ತು ಸೋಯಾಬೀನ್ ಖರೀದಿ ಅವಧಿಯನ್ನು ಜನವರಿ 26ರವರೆಗೆ ಹಾಗೂ ಹೆಸರುಕಾಳು, ಉದ್ದಿನಕಾಳು ಮತ್ತು ಸೂರ್ಯಕಾಂತಿ ಖರೀದಿ ಅವಧಿಯನ್ನು ಜನವರಿ 22ರವರೆಗೆ ವಿಸ್ತರಣೆ ಮಾಡಲಾಗಿದೆ.
ಈ ಎಲ್ಲಾ ಉತ್ಪನ್ನಗಳ ಖರೀದಿ ಅವಧಿ ಈಗಾಗಲೇ ಅಂತ್ಯವಾಗಿದ್ದು, ಖರೀದಿ ಪ್ರಕ್ರಿಯೆ ಅವಧಿ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.



