ಬೆಂಗಳೂರು: ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಹೋಟೆಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಮಧ್ಯರಾತ್ರಿ ೨ ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ನಗರದ ಮೂರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ.
ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ರ‍್ಕಾರಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಇದರಂತೆ ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್‌ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದರು.
ಬಳಿಕ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಆರಂಂಭಿಸಿದೆ. ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.
ಬಾಂಬ್ ಬೆದರಿಕೆ ಕುರಿತು ಮಾಹಿತಿ ಪಸರುತ್ತಿದ್ದಂತೆ ಹೋಟೆಲ್‌ಗಳ ಮುಂದೆ, ಕೆಲವು ಗಂಟೆಗಳ ಅನಿಶ್ಚಿತ ಮತ್ತು ಆತಂಕದ ವಾತಾವರಣ ರ‍್ಪಟ್ಟಿತ್ತು. ಬಳಿಕ ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದರು.
ಹೋಟೆಲ್ ಸಿಬ್ಬಂದಿ ಮತ್ತು ಅತಿಥಿಗಳಿಗೆ ಅಗತ್ಯವಾದ ರಕ್ಷಣೆ, ಘಟನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಜೊತೆಗೆ ಈ ಹೋಟೆಲ್‌ಗಳಲ್ಲಿ ಯಾವುದೇ ಸ್ಪೋಟಕ, ಬಾಂಬ್ ನಂತಹ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಭಯ ನೀಡಿದರು.ನಂತರ ಹೋಟೆಲ್‌ನಲ್ಲಿ ತಂಗಿದ್ದವರು, ಹೋಟೆಲ್ ಸಿಬ್ಬಂದಿ ಮತ್ತು ಮಾಲೀಕರು ನಿಟ್ಟುಸಿರು ಬಿಟ್ಟರು.
ಈ ಸಂಬಂಧ ಆಗ್ನೇಯ ವಿಭಾಗದ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ಹಿಂದೆ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಲಾಗಿತ್ತು. ಅದಾದ ಬಳಿಕ ಇಂತಹ ಹುಸಿ ಬಾಂಬ್ ಬೆದರಿಕೆಗಳು ಹೆಚ್ಚಾಗಿದ್ದು, ಜನರಲ್ಲಿ ಆತಂಕ ಹುಟ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ.