ಬಿಪಿನ್ ರಾವತ್ ಚಲಿಸುತ್ತಿದ್ದ ಹೆಲಿಕಾಪ್ಟರ್ ಪತನ

ಚೆನ್ನೈ,ಡಿ.೮-ಭಾರತೀಯ ಸೇನಾಪಡೆ ಮುಖ್ಯಸ್ಥ ಸೇರಿದಂತೆ ನಾಲ್ವರು ಚಲಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್ನಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರೆ ಮೂವರು ಸಂಚರಿಸುತ್ತಿದ್ದಾಗ ತಾಂತ್ರಿಕ ದೋಷ ಉಂಟಾಗಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.


ಘಟನೆಯಲ್ಲಿ ಬಿಪಿಎನ್ ರಾವತ್ ಸೇರಿದಂತೆ ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ವರದಿಗಳು ಬಂದಾಗ ಓರ್ವ ಸಿಬ್ಬಂದಿ ನಾಪತ್ತೆಯಾಗಿದ್ದು, ಪತ್ತೆ ಕಾರ್ಯ ಮುಂದುವರೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top