ಕೊನೆಗೂ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆ : 37 ಶಾಸಕರಿಗೆ ಒಲಿದ ಭಾಗ್ಯ

ಬೆಂಗಳೂರು:  ನಿಗಮ ಮಂಡಳಿಗಳಿಗೆ 37 ಶಾಸಕರ ಪಟ್ಟಿ ಅಂತಿಮಗೊಂಡಿದೆ. ಆದರೆ ಕಾರ್ಯಕರ್ತರ ಪಟ್ಟಿಗೆ ಇನ್ನೂ ಹೈಕಮಾಂಡ್‌ನ ಒಪ್ಪಿಗೆ ಸಿಕ್ಕಿಲ್ಲ. ನಿಗಮ ಮಂಡಳಿಗಳಿಗೆ ನೇಮಕ ಮಾಡಬೇಕಾದ ಕಾರ್ಯಕರ್ತರ ಹೆಸರಿನ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ವರಿಷ್ಠರಿಗೆ ಕಳುಹಿಸಿದೆ.

 

ಈ ಪಟ್ಟಿಗೆ ವರಿಷ್ಠರು ಇನ್ನು ಸಹಿ ಹಾಕಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇವರುಗಳು ಸಚಿವರುಗಳ ಜತೆ ಮಾತನಾಡಿ ಸುಮಾರು 39 ಕಾರ್ಯಕರ್ತರಿಗೆ ನಿಗಮ ಮಂಡಳಿ ಉಪಾಧ್ಯಕ್ಷರ ಹುದ್ದೆ ನೀಡುವ ಸಂಬಂಧ ಕಾರ್ಯಕರ್ತರುಗಳ ಹೆಸರುಗಳನ್ನು ಹೈಕಮಾಂಡ್‌ಗೆ ಕಳುಹಿಸಿಕೊಟ್ಟಿದ್ದರು. 

ಇಂದು ಸಂಜೆ ಹೊರ ಬಂದ ಸಿದ್ದರಾಮಯ್ಯನವರ ಆದೇಶದಂತೆ 36 ಮಂದಿ ಶಾಸಕರಿಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಮಾಡಲಾಗಿದ್ದು, ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಿದ ದಿನಾಂಕದಿಂದ  ಎರಡು ವರ್ಷಗಳ ಅವಧಿಗೆ ನೇಮಿಸಲಾಗಿದೆ. ಈ ಸಂಬಂಧ ಕೂಡಲೇ ಸೂಕ್ತ ದೇಶಗಳನ್ನು ಹೊರಡಿಸಲು ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ನವರ ಆದೇಶ ಪತ್ರದಲ್ಲಿ ಸೂಚಿಸಿದೆ. 

ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ, ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ ಅವರಿಗೆ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್,   ಕಾಗವಾಡ ಶಾಸಕ ಭರಮಗೌಡ ಕಾಗೆ ಅವರಿಗೆ ಹುಬ್ಬಳ್ಳಿ ಸಾರಿಗೆ ನಿಗಮ, ಬಾಗಲಕೋಟೆ ಶಾಸಕ ಯಮುನಪ್ಪ ಮೇಟಿ ಅವರಿಗೆ ಭಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ, ಗುಬ್ಬಿ ಶ್ರೀನಿವಾಸ್ ಅವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ್ ಅವರಿಗೆ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ, ಹೊಸದುರ್ಗ ಶಾಸಕ  ಬಿ.ಜಿ.ಗೋವಿಂದಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರಿಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ, ರೋಣ ಶಾಸಕ ಜಿ.ಎಸ್.ಪಾಟೀಲ್ ಅವರಿಗೆ ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಗಮಿತ, ಬೆಂಗಳೂರಿನ ಶಾಂತಿನಗರ ಶಾಸಕ ಹ್ಯಾರಿಸ್ ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೈಲಹೊಂಗಲ ಶಾಸಕ ಕೌಜಲಗಿ ಶಿವಾನಂದ ಅವರಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ, ಚಾಮರಾಜನಗರದ ಪುಟ್ಟರಂಗಶೆಟ್ಟಿ ಅವರಿಗೆ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್, ಬೀಳಗಿ ಶಾಸಕ ಜೆ.ಟಿ.ಪಾಟೀಲ್ ಅವರಿಗೆ ಹಟ್ಟಿ ಚಿನ್ನದ ಗಣಿ, ಶೋರಾಪುರ ಶಾಸಕ ರಾಜಾವೆಂಕಟಪ್ಪ ನಾಯಕ್ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ ಲ್ಯಾಂಡ್ ಆರ್ಮಿ, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಕರ್ನಾಟಕ ಗೃಹ ಮಂಡಳಿ, ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಅಬ್ಬಯ್ಯ ಪ್ರಸಾದ್ ಅವರಿಗೆ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ, ಸಾಗರ ಶಾಸಕ ಬಿ.ಕೆ.ಗೋಪಾಲಕೃಷ್ಣ ಬೇಳೂರು ಅವರಿಗೆ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ, ಮುಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಚಳ್ಳಕೆರೆಯ ರಘುಮೂರ್ತಿ ಅವರಿಗೆ ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ, ಶ್ರೀರಂಗಪಟ್ಟಣದ ರಮೇಶ್ ಬಂಡಿ ಸಿದ್ದೇಗೌಡ ಅವರಿಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಆನೇಕಲ್ ನ ಬಿ.ಶಿವಣ್ಣ ಅವರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಬಾಗೇಪಲ್ಲಿಯ ಎಸ್.ಎನ್,ಸುಬ್ಬಾರೆಡ್ಡಿ ಅವರಿಗೆ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ, ಧಾರವಾಡದ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಹೆಚ್.ಡಿ.ಕೋಟೆಯ ಅನಿಲ್ ಚಿಕ್ಕಮಾಧು ಅವರಿಗೆ ಜಂಗಲ್ ಲಾಡ್ಜಸ್,  ರಾಯಚೂರು ಗ್ರಾಮೀಣ ಕ್ಷೇತ್ರದ ಬಸವನಗೌಡ ದದ್ದಲ್ ಅವರಿಗೆ ಕರ್ನಾಟಕ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮ, ಕಲ್ಬುರ್ಗಿ ಉತ್ತರ ಕ್ಷೇತ್ರದ ಕನೀಜ್ ಫಾತಿಮಾ ಅವರಿಗೆ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ,  ಹುನಗುಂದ ಕ್ಷೇತ್ರದ ವಿಜಯಾನಂದ ಶಿವಶಂಕರಪ್ಪ  ಅವರಿಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರ, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಅವರನ್ನು ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರನ್ನಾಗಿ ನೇಮಿಸಿದ್ದಾರೆ. ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ, ಕೆಜಿಎಫ್ ಶಾಸಕಿ ರೂಪಕಲಾ ಎಂ ಅವರಿಗೆ ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ, ಕಾರವಾರದ ಸತೀಶ್ ಕೃಷ್ಣ ಸೈಲ್ ಅವರಿಗೆ ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ , ಹೊಸಕೋಟೆಯ ಶರತ್ ಬಚ್ಚೇಗೌಡ ಅವರಿಗೆ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃಧ್ಧಿ ನಿಗಮ ನಿಯಮಿತ ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ನೀಡಲಾಗಿದೆ. 

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top