ಹಾಸನ : ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರು ಇಂದು ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಪ್ರಾರಂಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಣೆ ಮಾಡಿ ನಮನ ಸಲ್ಲಿಸಿದರು.
ಸಂಸದರಾದ ಶ್ರೇಯಸ್ ಪಟೇಲ್,ಶಾಸಕರಾದ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಮತ್ತಿತರರು ಹಾಜರಿದ್ದರು.
Facebook
Twitter
LinkedIn
WhatsApp
Email
Print
Telegram