ಬೆಂಗಳೂರು: ರಾಜ್ಯದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಸಮಿತಿ ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು.
ವಿಧಾನಪರಿಷತ್‍ನಲ್ಲಿ ಸದಸ್ಯ ಬಸನಗೌಡ ಬಾದರ್ಲಿ ಅವರು ರಾಯಚೂರು ಜಿಲ್ಲೆ ಸಿಂಧನೂರಿಗೆ ಮಂಜೂರಾಗಿದ್ದ ಪಾಲಿಟೆಕ್ನಿಕ್ ಕಾಲೇಜನ್ನು ಬೆಳಗಾವಿ ಜಿಲ್ಲೆ ಕಾಗವಾಡಕ್ಕೆ ಸ್ಥಳಾಂತರ ಮಾಡಲಾಗಿದೆ. ನಮ್ಮದು ಹಿಂದುಳಿದ ಪ್ರದೇಶದ ಏಕಿಂಥ ತಾರತಮ್ಯ ಎಂದು ಪ್ರಶ್ನೆ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್, ಹಿಂದಿನ ಸರ್ಕಾರ ಅವೈಜ್ಞಾನಿಕವಾಗಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಮಂಜೂರು ಮಾಡಿದೆ. ಇದರಿಂದ ಸಿಗಬೇಕಾದ ಕಾಲೇಜುಗಳಿಗೆ ಸಿಕ್ಕಿಲ್ಲ. ಹೀಗಾಗಿ ಸಮಿತಿ ರಚನೆ ಮಾಡಲಾಗಿದೆ. ಈ ವರದಿ ಬಂದ ನಂತರ ಕಾಲೇಜುಗಳಿಗೆ ಪಾಲಿಟೆಕ್ನಿಕ್ ಮಂಜೂರು ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು.
ಅನುದಾನಿತ ಕಾಲೇಜುಗಳಿಗೆ ಪಾಲಿಟೆಕ್ನಿಕ್ ಕಾಲೇಜು ಅವಶ್ಯಕತೆ ಇದೆ ಎಂಬುದನ್ನು ಸಮಿತಿ ಅಧ್ಯಯನ ನಡೆಸಿ ವರದಿ ನೀಡುತ್ತದೆ. ಈ ವರದಿ ಬಂದ ನಂತರ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.