ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಮಾಜಿ ಶಾಸಕ ರಾಮಪ್ಪ ಲಮಾಣಿ

ಬೆಂಗಳೂರು: “ಯಾವುದೇ ಷರತ್ತು ಇಲ್ಲದೇ ನಾನು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ನಮಗೆ ಬಿಜೆಪಿಯಲ್ಲಿ ಆಗಿರುವ ನೋವಿನಿಂದ ನಾವು ಆ ಪಕ್ಷ ತೊರೆದಿದ್ದೇವೆ. ಕಾಂಗ್ರೆಸ್ ಪಕ್ಷದ ನಾಯಕರು ಸೇರಿ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ಅವರನ್ನು ಗೆಲ್ಲಿಸಲು ನಾನು ಶ್ರಮಿಸುತ್ತೇನೆ

ಜಗದೀಶ್ ಶೆಟ್ಟರ್ ಹಾಗೂ ಡಿ.ಕೆ. ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಅನೇಕ ನಾಯಕರಿಗೆ ಗಾಳ ಹಾಕಿದ್ದು, ಮುಂದಿನ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ. ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮಾಡಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಅನೇಕ ಶಾಸಕರು ಕೇವಲ 1500 ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದ್ದಾರೆ. ಇಲ್ಲದಿದ್ದರೆ, ಬಿಜೆಪಿ 40 ಸ್ಥಾನಗಳಿಗೆ ನಿಲ್ಲುತ್ತಿತ್ತು. ಮುಂದಿನ ದಿನಗಳಲ್ಲಿ ಬಿಜೆಪಿ ಇನ್ನಷ್ಟು ಧೂಳಿಪಟವಾಗಲಿದೆ. 

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ಜನರಿಗೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ. ಜನರು ಕೂಡ ಕಾಂಗ್ರೆಸ್ ಸರ್ಕಾರದ ಮೇಲೆ ಹೆಚ್ಚಿನ ವಿಶ್ವಾಸ ಇಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರೂ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುವುದಾಗಿ ಮಾತು ನೀಡಿದ್ದಾರೆ. ಅದಕ್ಕಾಗಿ ಪ್ರತ್ಯೇಕ ಕಾರ್ಯಕ್ರಮ ಮಾಡುತ್ತೇವೆ.

ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡ ಎಲ್ಲಾ ನಾಯಕರಿಗೂ ನಾನು ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸುತ್ತೇನೆ.”

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top