ಪ್ರತಿಭಟನೆ ಎಚ್ಚರಿಕೆ ನೀಡಿದ ಮಾಜಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ

ದೇವಸ್ಥಾನಗಳ ಅನುದಾನ ಬಿಡುಗಡೆಗೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಭಾರತೀಯ ಸಂಸ್ಕೃತಿಯಲ್ಲಿ ದೇವಸ್ಥಾನಗಳಿಗೆ ಬಹಳಷ್ಟು ಮಹತ್ವ ಇದೆ. ನಮ್ಮ‌ ಸರ್ಕಾರದಲ್ಲಿ ದೇವಸ್ಥಾನಗಳ, ಮಂದಿರಗಳ ಜೀರ್ಣೋದ್ಧಾರಕ್ಕಾಗಿ ಅನುದಾನ ಬಿಡುಗಡೆ ಮಾಡಿದ್ದೆವು. ಚುನಾವಣಾ ನೀತಿ ಸಂಹಿತೆ ಬಂದಿದ್ದ ಕಾರಣ ಎರಡನೇ ಕಂತು ಬಿಡುಗಡೆ ಆಗಿರಲಿಲ್ಲ. ಅನುದಾನ ತಡೆ ಹಿಡಿದಿರುವುದನ್ನು ಖಂಡಿಸುತ್ತೇನೆ. ಇದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದರು.

ದೇವಸ್ಥಾನ ಅಂದಾಗ ಯಾವುದೇ ಪಕ್ಷಪಾತ ಅಥವಾ ಬೇರೆ ರೀತಿಯಿಂದ ನೋಡುವ ಕೆಲಸ ಸರ್ಕಾರದಿಂದ ಆಗಬಾರದು. ನಾವು ಮಂಜೂರಾತಿ ಮಾಡಿರುವುದನ್ನು ಬಿಡುಗಡೆ ಮಾಡುವುದು ಸರ್ಕಾರ ಮತ್ತು ಸಚಿವರ ಜವಾಬ್ದಾರಿ. ಈ ಆದೇಶವನ್ನು ಸರ್ಕಾರ ಹಿಂಪಡೆಯಬೇಕು. ರಾಜ್ಯದಲ್ಲಿರುವ ದೇವಾಲಯಗಳ ಜೀರ್ಣೋದ್ಧಾರ ಆಗಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರವಾದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Facebook
Twitter
LinkedIn
WhatsApp
Telegram
Email
Tumblr

Leave a Comment

Your email address will not be published. Required fields are marked *

Translate »
Scroll to Top