ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ ಅವರಿಂದ ಸ್ವಾಗತ
ಬೆಂಗಳೂರು: ಆಪಲ್ ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ತಯಾರಿಕೆಯಲ್ಲಿ ಜಗತ್ತಿನ ಅಗ್ರಗಣ್ಯ ಕಂಪನಿಗಳಲ್ಲಿ ಒಂದಾಗಿರುವ ಫಾಕ್ಸ್ ಕಾನ್ ನ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ಶುಕ್ರವಾರ ಬೆಂಗಳೂರಿಗೆ ಆಗಮಿಸಿದರು.
ನವದೆಹಲಿಯಿಂದ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸರಕಾರದ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕ್ ರೂಪ್ ಕೌರ್ ಹಾಜರಿದ್ದರು.
ಫಾಕ್ಸ್ ಕಾನ್ ಕಂಪನಿಯು ರಾಜ್ಯದಲ್ಲಿ ಭಾರೀ ಹೂಡಿಕೆ ಮಾಡುತ್ತಿದ್ದು ಈ ಸಂಬಂಧ ವಿಸ್ತೃತ ಚರ್ಚೆ ನಡೆಸಲು ಲಿಯು ಇಲ್ಲಿಗೆ ಭೇಟಿ ನೀಡಿದ್ದಾರೆ.
Facebook
Twitter
LinkedIn
WhatsApp
Email
Print
Telegram