ಆರೋಗ್ಯ ನಂದನ ಅಡಿಯಲ್ಲಿ ಉಚಿತ ಚಿಕಿತ್ಸೆ


ಬಳ್ಳಾರಿ : ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಲು ಮಗು ಹುಟ್ಟಿದ ಮೂರು ವರ್ಷಗಳ ಕಾಲ ಪ್ರತಿ ಆರು ತಿಂಗಳಿಗೊಮ್ಮೆ ಮಕ್ಕಳ ತಜ್ಞರಿಂದ ಪರೀಕ್ಷೆ ಮಾಡಿಸಿ ಎಂದು ಜಿಪಂ ಸಿಇಒ ನಂದಿನಿ ಕೆ.ಆರ್ ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯಲ್ಲಿ ಆರೋಗ್ಯ ನಂದನ ಅಭಿಯಾನದಡಿಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಆವರಣದ ಮಕ್ಕಳ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಮಾತನಾಡಿದರು.


ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ ಮಾತನಾಡಿ ಮಕ್ಕಳಲ್ಲಿನ ನ್ಯೂನತೆಗಳನ್ನು ಗುರುತಿಸಲು ಮನೆ ಮನೆ ಸಮೀಕ್ಷೆ ಮಾಡಿ ಎಂದು ತಿಳಿಸಿದರು.
ಮಕ್ಕಳ ತಜ್ಞ ಡಾ.ಬಸವಪ್ರಭು ಅವರು ಮಾತನಾಡಿ, ಅಂಗವಿಕಲತೆ ಸಾಧನೆಗೆ ತೊಂದರೆ ಆಗಬಾರದು ಎಂದು ತಿಳಿಸಿದರು.ಅಂಗವಿಕಲತೆ ಮುನ್ನಟ್ಟಿ ಮುಂದೆ ಸಾಗಬೇಕು. ಕಾಯಿಲೆ ಕಾಣಿಸಿಕೊಂಡ ಪ್ರಾರಂಭದಲ್ಲಿಯೇ ಅದನ್ನು ಗುರುತಿಸಿ ಚಿಕಿತ್ಸೆ ನೀಡುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು. ಈ ಘಟಕದಲ್ಲಿ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಶಿಬಿರದಲ್ಲಿ ಸುಮಾರು 500ಕ್ಕೂ ಹೆಚ್ಚು ಮಂದಿ ಭೇಟಿ ನೀಡಿ ವೈದ್ಯರ ಸಲಹೆ ಪಡೆದು, ಮಕ್ಕಳಿಗೆ ಅಗತ್ಯ ಚಿಕಿತ್ಸೆ ತೆಗೆದುಕೊಳ್ಳಲು ಮುಂದಾದರು. ಈ ಸಮಯದಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ಇತರರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top