ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ನಿಂದ ಬಿಗ್ ರಿಲೀಫ್

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್‍ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಜನಾರ್ದನ ರೆಡ್ಡಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠವು ಬಳ್ಳಾರಿಗೆ ಭೇಟಿ ನೀಡದಂತೆ ಹಾಕಿದ್ದ ಷರತ್ತುಗಳನ್ನು ಸಡಿಲಿಸಿದೆ. ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ. ಅವರು ಇನ್ನು ಮುಂದೆ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಬಹುದು. ಅಲ್ಲಿರುವ ತಮ್ಮ ಐμÁರಾಮಿ ನಿವಾಸದಲ್ಲಿ ವಾಸ್ತವ್ಯವನ್ನು ಹೂಡಬಹುದಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿಗೆ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಷರತ್ತು ವಿಧಿಸಿತ್ತು. ಆದ್ದರಿಂದ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಬೆಂಗಳೂರಿನ ‘ಪಾರಿಜಾತ’ ನಿವಾಸದಲ್ಲಿಯೇ ವಾಸ್ತವ್ಯ ಹೂಡಿದ್ದರು.

ಗಾಲಿ ಜರ್ನಾಧನ ರೆಡ್ಡಿ ಅವರು ಬಳ್ಳಾರಿಗೆ ಬರಲಿ ಮುಕ್ತ ಅವಕಾಶ ನೀಡಿರುವ ಸುಪ್ರೀಂ ಕೋರ್ಟ್ ಆದೇಶದಿಂದ ಬಳ್ಳಾರಿ ಬಿಜೆಪಿ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಮುಖಂಡ ದಿವಾಕರ್ ಅವರು ಬಳ್ಳಾರಿ ಕನಕದುರ್ಗಮ್ಮ ಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ತಮ್ಮ ಸಂತಸವನ್ನು ನಮ್ಮೋಂದಿಗೆ ಹಂಚಿಕೊಂಡಿದ್ದಾರೆ.

ಬಳ್ಳಾರಿಗೆ ಆಗಮಿಸಲು ಸುಪ್ರೀಂಕೋರ್ಟ್ ಗಾಲಿ ಜರ್ನಾಧನ ರೆಡ್ಡಿ ಅವರಿಗೆ ಮುಕ್ತ ಅವಕಾಶ ನೀಡಿರುವುದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ. ನಮ್ಮ ನಾಯಕರ ಸ್ವಾಗತಕ್ಕಾಗಿ ಗುರುವಾರದಂದು ಭರ್ಜರಿ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ ದಿವಾಕರ್ ಅವರು ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲವರ್ಧನೆ ಸಿಗಲಿದೆ ಎಂದು ತಮ್ಮ ಸಂತಸ ಹಂಚಿÀಕೊಂಡರು.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ 2011ರಲ್ಲಿ ಜನಾರ್ದನ ರೆಡ್ಡಿಯನ್ನು ಬಂಧಿಸಿತ್ತು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2015 ರ ಜನವರಿ 23 ರಂದು ಸುಪ್ರೀಂ ಕೋರ್ಟ್ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ, ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು.

ತಮ್ಮ ರಾಜಕೀಯದ ಪ್ರಮುಖ ನೆಲೆಯಾಗಿರುವ ಬಳ್ಳಾರಿ ಭೇಟಿಗೆ ಸುಪ್ರೀಂ ಕೋರ್ಟ್ ನಿಬರ್ಂಧ ವಿಧಿಸಿದ್ದು, ಜನಾರ್ದನ ರೆಡ್ಡಿ ಅವರಿಗೆ ತೀವ್ರ ಹಿನ್ನಡೆ ಉಂಟುಮಾಡಿತ್ತು. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ನೀಡುವಾಗ ಸುಪ್ರೀಂಕೋರ್ಟ್ ವಿಧಿಸಿರುವ ಷರತ್ತುಗಳನ್ನು ಸಡಿಲಗೊಳಿಸಬೇಕು ಎಂದು ಕೋರಿ ಹಲವು ಬಾರಿ ಜನಾರ್ದನ ರೆಡ್ಡಿ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಬಳ್ಳಾರಿಗೆ ಭೇಟಿ ನೀಡುವ ಷರತ್ತು ಸಡಿಲಿಸಲು ಕೋರ್ಟ್ ನಿರಾಕರಿಸಿತ್ತು.

ಮಾಜಿ ಸಚಿವ ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಣಿ ವಿವಾಹದ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಅನುಮತಿ ಪಡೆದು ಬಳ್ಳಾರಿಯ ನಿವಾಸಕ್ಕೆ ಭೇಟಿ ನೀಡಿದ್ದರು. ವಿವಾಹದ ಕಾರಣ 10ಕ್ಕೂ ಹೆಚ್ಚು ದಿನಗಳ ಕಾಲ ಅವರು ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಲು ಕೋರ್ಟ್ ಅನುಮತಿ ನೀಡಿತ್ತು. ಬಳಿಕ ಬಳ್ಳಾರಿಗೆ ಭೇಟಿ ನೀಡಬಾರದು ಎಂಬ ಷರತ್ತು ಮತ್ತೆ ಮುಂದುವರೆದಿತ್ತು. ಪುತ್ರಿ ಬ್ರಹ್ಮಣಿ ಹೆರಿಗೆ ಸಮಯದಲ್ಲಿ ಮತ್ತೆ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡುಲು ಅನುಮತಿ ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಆಗಲೂ ಸಹ ಕೋರ್ಟ್ ಕೆಲವು ದಿನಗಳ ಕಾಲ ಅವರು ಬಳ್ಳಾರಿಯಲ್ಲಿರಲು ಅವಕಾಶವನ್ನು ನೀಡಿತ್ತು.

ಕಳೆದ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸಿದ್ದ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2024 ರ ಲೋಕಸಭೆ ಚುನಾವಣೆಗೂ ಮುನ್ನ ಮಾರ್ಚ್ 25ರಂದು ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದರು. ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ವನ್ನು ಷರತ್ತುರಹಿತವಾಗಿ ಬಿಜೆಪಿ ಜತೆ ವಿಲೀನಗೊಳಿಸಿದ್ದರು.

ಬಳ್ಳಾರಿಯಲ್ಲಿ ಸಂಭ್ರಮಾಚರಣೆ
ಬಳ್ಳಾರಿಯಲ್ಲಿ ಬಿಜೆಪಿ ಪಕ್ಷದ ಬೆಳವಣಿಗೆಗೆ ಕಾರಣೀಭೂತರಾದ ಪ್ರಮುಖ ರೂವಾರಿಗಳಾದ ಗಾಲಿ ಜನಾರ್ಧನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆಗೆ ಪ್ರವೇಶಕ್ಕೆ ಇದ್ದ ಸುಪ್ರೀಂ ಕೋರ್ಟ್‍ನ ನಿರ್ಬಂಧ ಸಡಲಿಕೆಯಾಗಿ ಮುಕ್ತ ಅವಕಾಶಕ್ಕೆ ಅನುಮತಿ ದೊರೆತಿರುವುದರಿಂದ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಬಳ್ಳಾರಿ ನಗರದ ಎಸ್ ಪಿ ಸರ್ಕಲ್ ಬಳಿ ಜಮಾಯಿಸಿದ ಕಾರ್ಯಕರ್ತರು ಜನಾರ್ಧನ ರೆಡ್ಡಿ ಅವರ ಪರ ಘೋಷಣೆ ಕೂಗಿ ಸಂಭ್ರಮಾಚರಿಸಿದರು. ಪಟಾಕಿ ಸಿಡಿಸಿ, ನೃತ್ಯ ಮಾಡಿ ತಮ್ಮ ಸಂತಸ ವ್ಯಕ್ತ ಪಡಿಸಿದ ಕಾರ್ಯಕರ್ತರು ಜನಾರ್ಧನ ರೆಡ್ಡಿ ಅವರ ಬಳ್ಳಾರಿ ಆಗಮನಕ್ಕೆ ಅತೀವ ಉತ್ಸಾಹದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

Facebook
Twitter
LinkedIn
WhatsApp
Telegram
Email
Print

Leave a Comment

Your email address will not be published. Required fields are marked *

Translate »
Scroll to Top