“ಗೃಹಲಕ್ಷ್ಮಿ” ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು ₹2 ಸಾವಿರ

ನುಡಿದಂತೆ ನಡೆದ ಸರ್ಕಾರ : ಸ್ತ್ರೀ ಸ್ವಾವಲಂಬನೆಯತ್ತ ಒಂದು ದಿಟ್ಟ ಹೆಜ್ಜೆ

ಬಳ್ಳಾರಿ:  ರಾಜ್ಯದ ಪ್ರತಿ ಬಡವರ ಮನೆಯ ಕುಟುಂಬದ ಯಜಮಾನಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಸಶಕ್ತರನ್ನಾಗಿ ಮಾಡಲು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯು ಜಾರಿಗೊಂಡು ರಾಜ್ಯದ ಕುಟುಂಬಗಳ ಮನೆ ಯಜಮಾನಿಯ ಮೊಗದಲ್ಲಿ ಮಂದಹಾಸ ಮೂಡಿಸಿದೆ.
            ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರವು “ಗೃಹಲಕ್ಷ್ಮಿ” ಯನ್ನು ರೂಪಿಸಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಠಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕುಟುಂಬದ ನಿರ್ವಹಣೆಯಲ್ಲಿ ಮನೆ ಯಜಮಾನಿಯ ಪಾತ್ರ ಬಹುದೊಡ್ಡದು. ಹೀಗಾಗಿ ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ನೂತನ ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ರೂ.2,000 ಜಮಾ ಮಾಡಲು ಯೋಜನೆ ರೂಪಿಸಿ ಅನುμÁ್ಠನವನ್ನೂ ಮಾಡಿದೆ.

“ಗೃಹಲಕ್ಷ್ಮಿ”ಯ ಆಗಮನದಿಂದ ಲಕ್ಷಾಂತರ ತಾಯಂದಿರ ಬದುಕಿನ ಕನಸುಗಳು ನನಸಾಗುವ ಕಾಲ ಬಂದಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡಜನರ ಬದುಕು ಬದಲಿಸಲಿದೆ.
            ಆರ್ಥಿಕ ಸಬಲೀಕರಣ: ರಾಜ್ಯದ ಮಹಿಳೆಯರಯನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಈ ಯೋಜನೆಗಳನ್ನು ಜಾರಿಗೊಳಿಸಿದೆ.

            ಕುಟುಂಬದ ನಿರ್ವಹಣೆಗೆ ಸಹಾಯ: ಪ್ರತಿ ಕುಟುಂಬದ ನಿರ್ವಹಣೆಯಲ್ಲಿ ಮನೆ ಒಡತಿಯ ಪಾತ್ರ ಬಹು ಮುಖ್ಯವಾಗಿರುತ್ತದೆ. ಆದ್ದರಿಂದ ಮನೆ ಯಜಮಾನಿ ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಹೀಗಾಗಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000 ಗಳನ್ನು ನೀಡುವ “ಗೃಹಲಕ್ಷ್ಮಿ” ಯೋಜನೆಯನ್ನು ರೂಪಿಸಲಾಗಿದೆ.
            ಗೃಹಲಕ್ಷ್ಮಿ ಯೋಜನೆಯಿಂದ 1 ಕೋಟಿ 30 ಲಕ್ಷ ಫಲಾನುಭವಿಗಳಿಗೆ ಲಾಭವಾಗಲಿದೆ. ಈ ವರ್ಷದ ಉಳಿದ ಅವಧಿಗೆ 17,500 ಕೋಟಿ ರೂ. ಹಾಗೂ ಇಡೀ ವರ್ಷಕ್ಕೆ 26,250 ಕೋಟಿ ರೂ. ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರವು 100 ದಿನ ಪೂರೈಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದೇಶ:
“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ತುಂಬಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ. ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನೆಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕೆ ಶತಕ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.


ಪ್ರಮುಖ ಅಂಶಗಳು:
• ಪಡಿತರ ಖಾತೆ ಹೊಂದಿರುವ ಕುಟುಂಬದ ಯಜಮಾನಿಗೆ ಖಾತೆಗೆ ಹಣ ಜಮೆ
• ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾಕೇಂದ್ರಗಳಲ್ಲಿ ಉಚಿತ ನೊಂದಣಿ
• ಅಧಿಕೃತ ‘ಪ್ರಜಾ ಪ್ರತಿನಿಧಿ’ ಸ್ವಯಂ ಸೇವಕರು ಕೂಡ ನಿಮ್ಮ ಮನೆ ಬಾಗಿಲಲ್ಲೇ ಉಚಿತವಾಗಿ ನೊಂದಣಿ ಮಾಡುತ್ತಾರೆ
•  ನೋಂದಣಿಗೆ ಬ್ಯಾಂಕ್ ಪಾಸ್ ಬುಕ್ ಪ್ರತಿ, ಪಡಿತರ ಕಾರ್ಡ್ ಸಂಖ್ಯೆ, ಯಾಜಮಾನಿಯ ಮತ್ತು ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ಮೊಬೈಲ್ ಸಂಖ್ಯೆ ಅಗತ್ಯವಿರುತ್ತದೆ.
ಗೃಹಲಕ್ಷ್ಮಿ ಯೋಜನೆ ಇವರಿಗೆ ಸಿಗುವುದಿಲ್ಲ

• ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಂತವರಿಗೆ ಈ ಯೋಜನೆಯ ಸೌಲಭ್ಯ ಸಿಗುವುದಿಲ್ಲ.
• ಕುಟುಂಬದ ಯಜಮಾನಿಯ ಪತಿ ಜಿಎಸ್‍ಟಿ ರಿಟನ್ಸ್ ಸಲ್ಲಿಸುವವರಾಗಿದ್ದಲ್ಲಿ ಅವರಿಗೂ ಗೃಹಲಕ್ಷ್ಮಿ ಯೋಜನೆ ಲಾಭ ಸಿಗಲ್ಲ.
ಬಳ್ಳಾರಿ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮಾಹಿತಿ:
ಗೃಹಲಕ್ಷ್ಮಿ ಯೋಜನೆಯು ಪ್ರಾರಂಭದಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ 3,01,180 ರೇಷನ್‍ಕಾರ್ಡ್‍ಗಳ ಪೈಕಿ 2,59,161 (ಶೇ.86.05) ಫಲಾನುಭವಿಗಳು  ನೊಂದಾಯಿಸಿಕೊಂಡಿದ್ದು, ಈ ಪೈಕಿ ರಾಜ್ಯದಲ್ಲಿ ನೊಂದಣಿ ಪ್ರಕ್ರಿಯೆಯಲ್ಲಿ ಜಿಲ್ಲೆಯು ಐದನೇ ಸ್ಥಾನದಲ್ಲಿದೆ.


ಜಿಲ್ಲೆಯ ಅರ್ಹ ಫಲಾನುಭವಿ ಮಹಿಳೆಯರಿಗೆ ಆಗಸ್ಟ್ ಮಾಹೆಯಲ್ಲಿ ಬಿಡುಗಡೆಯಾದ ವೆಚ್ಚ ಮಾಹಿತಿ:
ಪರಿಶಿಷ್ಟ ಜಾತಿ ಫಲಾನುಭವಿಗಳು: 47,202  ಫಲಾನುಭವಿಗಳಿಗೆ ಆಗುವ ವೆಚ್ಚ 9,44,04,000 ರೂ.
ಪರಿಶಿಷ್ಟ ಪಂಗಡ ಫಲಾನುಭವಿಗಳು: 48,133 ಫಲಾನುಭವಿಗಳಿಗೆ ಆಗುವ ವೆಚ್ಚ 9,62,66,000 ರೂ.
ಇತರೆ: 1,52,092 ಫಲಾನುಭವಿಗಳಿಗೆ ಆಗುವ ವೆಚ್ಚ 30,41,84,000 ರೂ. ವೆಚ್ಚ ಆಗಲಿದ್ದು, ಒಟ್ಟು ಜಿಲ್ಲೆಯ 2,47,427 ಫಲಾನುಭವಿಗಳಿಗೆ ಈ ಆಗಸ್ಟ್ ಮಾಹೆಯಲ್ಲಿ ಒಟ್ಟು 49,48,54,000 ರೂ. ಪಾವತಿಯಾಗಲಿದೆ ಎಂದು ಯುವಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಾಹಿತಿ ನೀಡಿದ್ದಾರೆ.

ನಮ್ಮದು ಬಡ ಕುಟುಂಬ. ಪ್ರತಿದಿನ ತರಕಾರಿ, ಇತರೆ ಅಂಗಡಿ ದಿನಸಿಗೆ ಗಂಡನ ಹತ್ತಿರ ಕೈಚಾಚಬೇಕಿತ್ತು. ಈಗ ಹೊಸ ಸರ್ಕಾರದ “ಗೃಹಲಕ್ಷ್ಮಿ” ಯೋಜನೆಯಿಂದ ₹2000 ಹಣ ಜಮೆ ಆಗಿದೆ. ಇದರಿಂದ ಮನೆಗೆ ತರಕಾರಿ, ಪಲ್ಯೆ ಹಾಗೂ ಅಂಗಡಿ ದಿನಸಿ ಖರೀದಿಸಿ ಪೌಷ್ಟಿಕ ಆಹಾರ ಸೇವನೆ ಮಾಡಲು ಅನುಕೂಲವಾಗುತ್ತಿದೆ. ಬಹಳ ಸಂತೋಷವಾಗಿದೆ.
                                                                                    ಮಲ್ಲಮ್ಮ, ಮನೆಯ ಯಜಮಾನಿ, ಕುರುಗೋಡು.

ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಮನೆ ನಡೆಸಲು ಕಷ್ಟಕರವಾಗಿತ್ತು. ಸಿದ್ದರಾಮಯ್ಯ ಅವರ ಸರ್ಕಾರ ಬಡವರಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ 2 ಸಾವಿರ ದುಡ್ಡು ಕೊಡ್ತಿದ್ದಾರೆ. ಮನೆಗೆ ಬೇಕಾದ ಸಾಮಗ್ರಿಗಳನ್ನು ಕೊಂಡುಕೊಳ್ಳಬಹುದು. ಇದರಿಂದ ಮನೆ ಬಾಳ್ವೆ ನಡೆಸಲು ಸ್ವಲ್ಪ ಆರಾಮು ಅನ್ನಿಸ್ತಾ ಇದೆ.
                                                            ರೇಣುಕಾ, ಗೃಹಲಕ್ಷ್ಮಿ ಯೋಜನೆ ಫಲಾನುಭವಿ, ದಮ್ಮೂರು ಗ್ರಾಮ.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top