ಗಿಣಿರಾಮದ ರಿತ್ವಿಕ್ ಮಠದ್ ನಾಯಕನಾಗಿರುವ ಉತ್ಸವ

ಸದ್ದಿಲ್ಲದೆ ಶೂಟಿಂಗ್ ಮುಗಿಸಿರುವ ಉತ್ಸವ ಸಿನಿಮಾದಲ್ಲಿ ಗಿಣಿರಾಮ ಸೀರಿಯಲ್ ಖ್ಯಾತಿಯ ರಿತ್ವಿಕ್ ಮಠದ್ ನಾಯಕನಾಗಿ ನಟಿಸಿದ್ದಾರೆ. ಈ ಹಿಂದೆ ಆ ಎರಡು ವರ್ಷಗಳು, ಗಿಫ್ಟ್ ಬಾಕ್ಸ್ ಚಿತ್ರದಲ್ಲಿ ನಟಿಸಿದ್ದ ರಿತ್ವಿಕ್ ಮಠದ್ ಅವರಿಗೆ  ‘ಉತ್ಸವ’  3ನೇ ಸಿನಿಮಾ. ಈ ಚಿತ್ರದ ಮೂಲಕ ಅರುಣ್ ಸೂರ್ಯ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಇದಕ್ಕೆ ಮುನ್ನ  ನಾಗೇಂದ್ರ ಅರಸ್ ಸೇರಿದಂತೆ ಹಲವು ನಿರ್ದೇಶಕ ಗರಡಿಯಲ್ಲಿ ಸಹಾಯಕ ಹಾಗೂ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವ ಅರುಣ್ ಸೂರ್ಯ ಬೆನ್ನಿಗಿದೆ.

ಫೇಸ್ಟು ಪೇಸ್ ಸಿನಿಮಾ ಖ್ಯಾತಿಯ ಪೂರ್ವಿ ಜೋಷಿ ರಿತ್ವಿಕ್ ಮಠದ್ ಗೆ  ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಉಳಿದಂತೆ ನಾಗೇಂದ್ರ ಅರಸ್, ಪ್ರಕಾಶ್ ತುಮ್ಮಿನಾಡ್ ತಾರಾಬಳಗದಲ್ಲಿದ್ದಾರೆ. ಪ್ರೇಮಕಥಾ ಹಂದರ ಹೊಂದಿರುವ ಉತ್ಸವ ಸಿನಿಮಾವನ್ನು ಅರಸ ಪ್ರೊಡಕ್ಷನ್ ನಡಿ ಉಷಾ ಶ್ರೀನಿವಾಸ ನಿರ್ಮಾಣ ಮಾಡಿದ್ದಾರೆ. ಜಯಂತ್ ಕಾಯ್ಕಿಣಿ ಹಾಡುಗಳಿಗೆ ಎಮಿನಲ್ ಮಹಮ್ಮದ್ ಸಂಗೀತ ಒದಗಿಸಿದ್ದು, ಜಾವೀದ್ ಆಲಿ ಹಾಗೂ ಅಕಿಂತಾ ಕುಂಡು ಧ್ವನಿಯಾಗಿದ್ದಾರೆ. ಶಿವರಾಜ್ ಮೆಹೋ ಸಂಕಲನ, ಗೌತಮ್ ಮನು ಛಾಯಾಗ್ರಹಣ ಚಿತ್ರಕ್ಕಿದೆ. ಮನಾಲಿ ಹಾಗೂ ಗೋವಾದಲ್ಲಿ ಉತ್ಸವ ಶೂಟಿಂಗ್ ನಡೆಸಲಾಗಿದೆ.

Facebook
Twitter
LinkedIn
WhatsApp
Telegram

Leave a Comment

Your email address will not be published. Required fields are marked *

Translate »
Scroll to Top