ನಗರದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕ್ಕೆ ಹೆಚ್ಚಿನ ಆದ್ಯತೆ ನೀಡಿ : ಸಚಿವ ಬಿ.ನಾಗೇಂದ್ರ

ಬಳ್ಳಾರಿ: ನಗರದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕ್ಕೆ ಹೆಚ್ಚಿನ ಆದ್ಯತೆ ನೀಡಿ ಬಳ್ಳಾರಿ ನಗರವನ್ನು ಸುಂದರವಾಗಿಡಲು ಪಾಲಿಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು.

 

          ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಾಲಿಗೆ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಈ ಹಿಂದಿನ ಕೆಲವು ಕಾಮಗಾರಿಗಳನ್ನು ಯಾವುದೇ ಕಾರಣಕ್ಕೂ ತಡ ಮಾಡದೇ ಅತಿ ಶೀಘ್ರದಲ್ಲಿ ಕಾಮಗಾರಿಗಳನ್ನು ಮುಗಿಸಬೇಕು ಎಂದರು.

ಬಳ್ಳಾರಿ ನಗರವನ್ನು ಸುಂದರವಾಗಿ ಇಟ್ಟುಕೊಳ್ಳಲು ಮೊದಲು ನೈರ್ಮಲ್ಯ ದಿಂದ ಇರಬೇಕಾಗುತ್ತದೆ. ಹಾಗಾಗಿ ಪ್ರತಿ ತಿಂಗಳು ನಗರದ ಪ್ರತಿ ವಾರ್ಡ್ ಗಳಲ್ಲಿ ನೈರ್ಮಲ್ಯ ದಿನವನ್ನಾಗಿ ಮಾಡಲಾಗುವು. ಇದರಿಂದ ವಾರ್ಡ್ಗಳಲ್ಲಿ ಸ್ವಚ್ಛತೆ ಕಾಪಾಡಲು ಅನುಕೂಲವಾಗುತ್ತದೆ ಎಂದರು.

 

          ನಗರದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುತ್ತಿರುವುದು ಕಂಡು ಬರುತ್ತಿದೆ. ಅದಕ್ಕೆ ಆದಷ್ಟು ಬೇಗ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ ಅವರು ನಮ್ಮ ಆಡಳಿತದ ಅವಧಿಯಲ್ಲಿ ಯಾವುದೇ ರೀತಿಯ ನ್ಯೂನತೆ ಕಂಡುಬರದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ನಗರವನ್ನು ಸ್ವಚ್ಛತೆಯಿಂದ ಇಡಲು ಲೇಬರ್ ಕೊರತೆ ಇದ್ದು, ಡಿಎಂಫ್ ಅಡಿಯಲ್ಲಿ ಲೇಬರ್ ಗಳನ್ನು ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳೊಂದೆ ಚರ್ಚೆ ಮಾಡಿ ಅವಕಾಶ ಇದ್ದರೆ ಲೇಬರ್ ಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾನ್ಯ ಸಚಿವ ಬಿ.ನಾಗೇಂದ್ರ ಹೇಳಿದರು.

 

          ಈ ಸಂದರ್ಭದಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮೇಯರ್ ಡಿ. ತ್ರಿವೇಣಿ, ಉಪಮೇಯರ್ ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಪಾಲಿಕೆ ಆಯುಕ್ತರಾದ ಬಿ. ಖಲೀಲ್ ಸಾಬ್, ಮಹಾನಗರ ಪಾಲಿಕೆ ಸದಸ್ಯರಾದ ನೂರ್ ಮಹಮ್ಮದ್, ಹನುಮಂತ ಗುಡಿಗಂಟಿ, ವಿ.ಕುಬೇರ, ವಿವೇಕ್ ಸೇರಿದಂತೆ ಪಾಲಿಕೆ ಸದಸ್ಯರು ಹಾಗೂ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top