ನವದೆಹಲಿ, ಡಿ.೨೪-ದೇಶದಲ್ಲಿ ದಿನೆ ದಿನೆ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ದೆಹಲಿಗೆ ಪ್ರಯಾಣಿಸುವ ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದುವೆ ಎಲ್ಲಾ ವಿಮಾನ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮತ್ತು ಮಾದರಿ ಸಂಗ್ರಹಣೆಯನ್ನು ಕಡ್ಡಾಯ. ಭಾರತದ ಪ್ರಯಾಣಿಕರು ದೆಹಲಿಗೆ ಬರುವಾಗ ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳುವು ದು ಕಡ್ಡಾಯ.
ಸರ್ಕಾರದ ಹೊಸ ಮಾರ್ಗಸೂಚಿಗಳ ಪ್ರಕಾರ, ಎಲ್ಲಾ ಪ್ರಯಾಣಿಕರು ಬಂದ ನಂತರ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ. ಎಲ್ಲಾ ಪ್ರಯಾಣಿಕರು ದೆಹಲಿಗೆ ಆಗಮಿಸಿದ ನಂತರ ಅವರ ಮಾದರಿ ಸಂಗ್ರಹಣೆಯನ್ನು ಮಾಡಲಾಗುತ್ತದೆ. ಕೋವಿಡ್-೧೯ ಪ್ರಕರಣಗಳು ಹೆಚ್ಚಾಗಿರುವ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿಯೇ ಪರೀಕ್ಷೆ ಮಾಡಲಾಗುತ್ತದೆ. ಮಾದರಿ ಸಂಗ್ರಹಣೆಯ ನಂತರವೇ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಿಂದ ತೆರಳಲು ಅನುಮತಿ ನೀಡಲಾಗುವುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.