ರಾಜ್ಯಪಾಲರ ನಡೆ ಸಂವಿಧಾನ ಬಾಹಿರ: ಸಿಎಂ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ಉಪಮುಖ್ಯಮಂತ್ರಿಗಳು, ಗೃಹ ಸಚಿವರು ಸೇರಿದಂತೆ ಕೆಲ ಸಚಿವರೊಂದಿಗೆ ನವದೆಹಲಿಗೆ ತೆರಳಾಗಿತ್ತು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ. ವಿಪಕ್ಷಗಳು  ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು, ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ ಚರ್ಚಿಸಲಾಗಿದೆ. ನಮ್ಮ ಸರ್ಕಾರ ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ, ರಾಜ್ಯಪಾಲರ ನಿರ್ಣಯವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಿದೆ. ಸಚಿವ ಸಂಪುಟದಲ್ಲಿಯೂ ಅವರ ನಿರ್ಣಯವನ್ನು ಸ್ಪಷ್ಟವಾಗಿ ಖಂಡಿಸಿರುವ ಬಗ್ಗೆಯೂ ವರಿಷ್ಠರಿಗೆ ವಿವರಿಸಲಾಗಿದೆ ಎಂದರು.

ಎಲ್ಲಾ ಸಾಧ್ಯತೆಗಳಿಗೂ ಅವಕಾಶವಿದೆರಾಜ್ಯಪಾಲರ ನಡೆಯ ವಿರುದ್ಧ  ಮಾನ್ಯ ರಾಷ್ಟ್ರಪತಿಗಳಿಗೆ ದೂರು ನೀಡುವ ಬಗ್ಗೆ ನವದೆಹಲಿಯಲ್ಲಿ ಚರ್ಚೆಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಎಲ್ಲಾ ಸಾಧ್ಯತೆಗಳಿಗೂ ಅವಕಾಶವಿದೆ ಎಂದರು.

ವಾಪಸ್ಸಾಗಿರುವ ಬಿಲ್ ಗಳ ಪರಿಶೀಲನೆಸರ್ಕಾರ ಸಲ್ಲಿಸಿದ ಬಿಲ್ ಗಳನ್ನು ರಾಜ್ಯಪಾಲರು ವಾಪಸ್ಸು ಕಳಿಸಿದ್ಧು, ರಾಜಭವನ ಮತ್ತು ಸರ್ಕಾರದ ನಡುವೆ ಸಂಘರ್ಷ ಪ್ರಾರಂಭವಾಗಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಆರು ಮಸೂದೆಗಳನ್ನು ವಾಪಸ್ಸು ಕಳಿಸಲಾಗಿದ್ದು, ಈ ಬಗ್ಗೆ ಮತ್ತೊಮ್ಮೆ ಸಚಿವಸಂಪುಟದಲ್ಲಿ ಚರ್ಚಿಸಲಾಗುವುದು. ರಾಜ್ಯಪಾಲರಿಗೆ ಸಲ್ಲಿಸಲಾಗಿದ್ದ ಮಸೂದೆಗಳು, ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಅಂಗೀಕೃತಗೊAಡಿದ್ದರಿAದ , ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ದರ ಹೆಚ್ಚಳದ ಬಗ್ಗೆ ಚರ್ಚಿಸಿ ಕ್ರಮ:ಸರ್ಕಾರ ಬಸ್ ದರಗಳನ್ನು ಹೆಚ್ಚಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಬಸ್ ದರದಂತೆಯೇ ನೀರಿನ ದರವನ್ನು ಏರಿಸಲಾಗುವುದು ಎಂದಿದ್ದರು. ಆದರೆ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ. ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೆಪಿಎಸ್ ಸಿ ಪರೀಕ್ಷೆ ಬಗ್ಗೆ ಗೊಂದಲವಿರುವ ಬಗ್ಗೆ ಮಾತನಾಡುತ್ತಾ,  ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದರು.

Facebook
Twitter
LinkedIn
WhatsApp
Telegram
Email
Print

Leave a Comment

Your email address will not be published. Required fields are marked *

Translate »
Scroll to Top