ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತಿಗಳ ತೆರಿಗೆ ಸಂಗ್ರಹವನ್ನು ಹೆಚ್ಚಳ ಮಾಡಲು ಕ್ರಮ ಕೈಗೊಂಡಿದ್ದು, ಕಳೆದ ಶನಿವಾರ ಒಂದೇ ದಿನ ತೆರಿಗೆ ಸಂಗ್ರಹದಲ್ಲಿ ವಿಕ್ರಮ ಸಾಧಿಸಿದ್ದು ದಾಖಲೆ ಮಾಡಿದೆ.
ತೆರಿಗೆ ಸಂಗ್ರಹಕ್ಕಾಗಿ ಗ್ರಾಮ ಪಂಚಾಯತಿಗಳಿಗೆ ಒದಗಿಸಲಾಗಿರುವ ಪಿಒಎಸ್ (ಪಾಯಿಂಟ್ ಆಫ್ ಸೇಲ್) ಯಂತ್ರಗಳ ಮೂಲಕ ತೆರಿಗೆ ಪಾವತಿಸಲು ಅನುಕೂಲ ಮಾಡಿಕೊಡಲಾಗಿದ್ದು, ರಾಜ್ಯದ 5000 ಗ್ರಾಮ ಪಂಚಾಯತಿಗಳ ಮೂಲಕ ಶನಿವಾರ (ಜುಲೈ 15) 3.5 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಒಂದೇ ದಿನದಲ್ಲಿ ಹೆಚ್ಚು ತೆರಿಗೆ ಸಂಗ್ರಹಿಸಿದ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗವನ್ನು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಶ್ಲಾಘಿಸಿದ್ದಾರೆ,
ಗ್ರಾಮ ಪಂಚಾಯತಿ ತೆರಿಗೆ ಹಾಗೂ ಇನ್ನಿತರ ಶುಲ್ಕಗಳನ್ನು ಪಾವತಿಸಲು 3016 ಪಂಚಾಯತಿಗಳಲ್ಲಿ ಪಿಒಎಸ್ ಸೌಲಭ್ಯವನ್ನು ಒದಗಿಸಲಾಗಿದೆ.
Facebook
Twitter
LinkedIn
WhatsApp
Telegram
Email
MARISWAMY. V