ಜಿ.ಟಿ.ಸುರೇಶ್ ಸಿದ್ಧಾಪುರ ತಮ್ಮ ಸ್ಥಾನಕ್ಕೆ ರಾಜಿನಾಮೆ

ಚಿತ್ರದುರ್ಗ: ಬಿ.ಜೆ.ಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಟಿ.ಸುರೇಶ್ ಸಿದ್ಧಾಪುರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಬಿ.ಜೆ.ಪಿ. ನಗರಾಧ್ಯಕ್ಷನಾಗಿ ನೇಮಿಸಿ ನಂತರ ಜಿಲ್ಲಾ ಪ್ರಧಾನಕಾರ್ಯದರ್ಶಿ ಹುದ್ದೆ ನೀಡಿ ನನ್ನ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನಾಗಿ ಆಯ್ಕೆ ಮಾಡಿರುವುದರಿಂದ ಪಕ್ಷದಲ್ಲಿ ಒಂದಕ್ಕಿ0ತ ಹೆಚ್ಚು ಹುದ್ದೆಯಲ್ಲಿ ಇರಬಾರದೆಂಬ ನಿಯಮ ಇರುವ ಕಾರಣ ಬಿ.ಜೆ.ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಮತ್ತು ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದ್ದಾರೆ.


ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿದ ಸ್ಥಳೀಯ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಂಘಟನಾ ಕಾರ್ಯದರ್ಶಿ ಸಂತೋಷ್‌ಜಿ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಜೇಷ್ಠ ಪಡಿವಾಳ್, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಎ. ಮುರುಳಿ ಇವರುಗಳಿಗೆ ಹೃತ್ಪೂರ್ವಕವಾದ ಧನ್ಯವಾದಗಳನ್ನು ಸುರೇಶ್ ಸಿದ್ದಾಪುರ ಅರ್ಪಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top