ಹರಿಯಾಣ: ಚಲಿಸುತ್ತಿದ್ದ ಟೂರಿಸ್ಟ್ ಬಸ್ಸಿಗೆ ಹೊತ್ತಿಕೊಂಡ ಬೆಂಕಿ; 8 ಮಂದಿ ಭಕ್ತರು ಸಜೀವ ದಹನ

ನುಹ್ : ಕುಂಡ್ಲಿ- ಮಾನೇಸರ್- ಪಲ್ವಾಲ್ ಎಕ್ಸ್‌ಪ್ರೆಸ್‌ವೇಯಲ್ಲಿ ತಡರಾತ್ರಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಅವಘಡದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿ ಸಜೀವ ದಹನವಾಗಿದ್ದಾರೆ. ೨೪ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರು ಚಂಡೀಗಢ ಮತ್ತು ಪಂಜಾಬ್ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಇವರೆಲ್ಲರೂ ಮಥುರಾ ಮತ್ತು ವೃಂದಾವನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದವರು. ಬಸ್ಸಿನಲ್ಲಿ ಸುಮಾರು ೬೦ ಜನ ಪ್ರಯಾಣಿಕರು ಇದ್ದರು. ಅವರಲ್ಲಿ ಮಕ್ಕಳು ಮತ್ತು ಮಹಿಳೆಯರೂ ಸೇರಿದ್ದರು. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ, ಕೆಲವೇ ಹೊತ್ತಿನಲ್ಲಿ ಬಸ್ ಸಂಪರ‍್ಣ ಸುಟ್ಟು ಕರಕಲಾಗಿದೆ.. ಗಾಯಗೊಂಡವರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ನುಹ್ ಜಿಲ್ಲೆಯ ತವಾಡು ಪಟ್ಟಣದ ಸಮೀಪವಿರುವ ಕುಂಡ್ಲಿ- ಮಾನೇಸರ್- ಪಲ್ವಾಲ್ ಎಕ್ಸ್‌ಪ್ರೆಸ್‌ವೇನಲ್ಲಿ ಬಸ್ ಚಲಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಟೂರಿಸ್ಟ್ ಬಸ್ ಬಾಡಿಗೆ ಪಡೆದಿದ್ದೆವು. ಬನಾರಸ್, ಮಥುರಾ, ವೃಂದಾವನ ರ‍್ಶನ ಪಡೆದು ವಾಪಸ್ ಮರಳುತಿದ್ದೆವು. ಈ ಬಸ್ನಲ್ಲಿ ಒಟ್ಟು ೬೦ ಮಂದಿ ಇದ್ದೆವು. ಇವರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಇದ್ದಾರೆ. ನಾವೆಲ್ಲರೂ ಹತ್ತಿರದ ಸಂಬಂಧಿಗಳು. ಪಂಜಾಬ್‌ನ ಲೂಧಿಯಾನ, ಹೋಶಿಯಾಪುರ ಮತ್ತು ಚಂಡೀಗಢ ನಿವಾಸಿಗಳು. ರ‍್ಶನ ಮುಗಿಸಿ ಹಿಂತಿರುಗುತ್ತಿದ್ದಾಗ, ತಡರಾತ್ರಿ ಬಸ್ಸಿನ ಹಿಂಬದಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಇದು ಚಾಲಕನಿಗೆ ಗಮನಕ್ಕೆ ಬರಲಿಲ್ಲ ಎಂದು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸರೋಜ ಎಂಬುವು ತಿಳಿಸಿದ್ದಾರೆ.

 

ತಡರಾತ್ರಿ ೧.೩೦ರ ಸುಮಾರಿಗೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಸ್ಥಳೀಯರು ನೋಡಿದ್ದಾರೆ. ಬಸ್ಸಿನ ಹಿಂಬದಿಯಿಂದ ಭಾರಿ ಪ್ರಮಾಣದ ಬೆಂಕಿ ಹಬ್ಬುತ್ತಿತ್ತು. ಗ್ರಾಮಸ್ಥರು ಕೂಗಿ ಕೂಗಿ ಬಸ್ ಚಾಲಕನಿಗೆ ಬಸ್ ನಿಲ್ಲಿಸುವಂತೆ ಮನವಿ ಮಾಡಿದರು. ಆದ್ರೆ ಬಸ್ ಚಾಲಕ ಇತ್ತ ಗಮನ ಹರಿಸಿಲ್ಲ. ಇದಾದ ಬಳಿಕ ಯುವಕನೊಬ್ಬ ಬೈಕ್ನಲ್ಲಿ ಬಸ್ನ್ನು ಹಿಂಬಾಲಿಸಿಕೊಂಡು ಬಂದು ಬಸ್ನ ಮುಂದೆ ಬೈಕ್ ಇಟ್ಟು ಬಸ್ ನಿಲ್ಲಿಸಿದ್ದಾನೆ. ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸಪಟ್ಟು ಬಸ್‌ನಲ್ಲಿ ಸಿಲುಕಿದ್ದ ಕೆಲವರನ್ನು ರಕ್ಷಿಸಿದ್ದಾರೆ. ಅಷ್ಟರಲ್ಲಿ ಗ್ರಾಮಸ್ಥರು ಪೊಲೀಸ್ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top