ರಾಮನಗರಕ್ಕೆ ಹೇಮಾವತಿ ನಾಲೆ ನೀರು; ಡಿಕೆಶಿ ವಿರುದ್ಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ತುಮಕೂರು: ತುಮಕೂರು ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ನಾಲೆಯ ನೀರನ್ನು ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್ ಮೂಲಕ ರಾಮನಗರಕ್ಕೂ ತಿರುಗಿಸಲು ರ‍್ಕಾರ ಯೋಜನೆ ರೂಪಿಸಿದ್ದು, ಕಾಮಗಾರಿಯನ್ನೂ ಆರಂಭಿಸಿದೆ. ಯೋಜನೆಯನ್ನು ವಿರೋಧಿಸಿ ಗುಬ್ಬಿ ತಾಲೂಕಿನಲ್ಲಿ ಬಿಜೆಪಿ ನಾಯಕರು ಗುರುವಾರ ಪ್ರತಿಭಟನೆ ನಡೆಸಿದರು.

ಮಾಜಿ ಸಚಿವ ಸೊಗಡು ಶಿವಣ್ಣ, ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ, ಶಾಸಕ ಜಿ.ಬಿ.ಜ್ಯೋತಿಗಣೇಶ್, ತುರುವೇಕೆರೆ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ, ಜಿಲ್ಲೆಯ ರ‍್ಮಗುರುಗಳು ಹಾಗೂ ಸಾವಿರಾರು ರೈತರು ಡಿ.ರಾಂಪುರ ಗ್ರಾಮಕ್ಕೆ ಮುತ್ತಿಗೆ ಹಾಕಿದರು.

ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತುಮಕೂರು ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ನೀರನ್ನು ಹಾಸನ ಜಿಲ್ಲೆಯ ಗೊರೂರು ಜಲಾಶಯದಿಂದ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರಕ್ಕೆ ಹರಿಸುವ ಯೋಜನೆಗೆ ಮಂಜೂರಾತಿ ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಆರೋಪಿಸಿದರು,

ಅಂದಾಜು ೧,೦೦೦ ಕೋಟಿ ರೂಪಾಯಿ ವೆಚ್ಚದ ಈ ಯೋಜನೆಗೆ ೨೦೧೮ ರಲ್ಲಿ ಕಾಂಗ್ರೆಸ್-ಜೆಡಿಎಸ್ ರ‍್ಕಾರದ ಅವಧಿಯಲ್ಲಿ ಅನುಮತಿ ನೀಡಲಾಗಿದ್ದು, ೨೦೨೩ ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕಾಮಗಾರಿ ಆರಂಭವಾಗಿದೆ.

ಹೇಮಾವತಿ ನೀರಿಗಾಗಿ ಈ ಹಿಂದೆ ಹೋರಾಟಗಳು ನಡೆದಿದ್ದವು. ನಿರಂತಕ ಹೋರಾಟದ ಫಲವಾಗಿ ಜಿಲ್ಲೆಗೆ ಹೇಮಾವತಿ ಎಡದಂಡೆ ನಾಲೆಯ ಮೂಲಕ ೨೪.೫ ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಜಿಲ್ಲೆ ನೀರು ಪಡೆಯುತ್ತಿದೆ. ಆದರೆ, ಈಗ ನಮ್ಮ ನೀರನ್ನು ಕಿತ್ತುಕೊಳ್ಳುವ ಯೋಜನೆ ರೂಪಿಸಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮ್ಮ ಅಧಿಕಾರದ ರ‍್ಪ ಮೆರೆದಿದ್ದಾರೆ. ಜಿಲ್ಲೆಯಲ್ಲಿನ ಇಬ್ಬರು ಸಚಿವರು ಯೋಜನೆಯ ವಿಚಾರದಲ್ಲಿ ಮೌನವಾಗಿದ್ದಾರೆ. ಯೋಜನೆಯನ್ನು ಕೈಬಿಟ್ಟು, ಕಾಮಗಾರಿ ನಿಲ್ಲಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದರು.

 

ಈ ಪ್ರತಿಭಟನೆ ರಾಜಕೀಯೇತರವಾಗಿದ್ದು, ಜಿಲ್ಲೆಯ ಹಿತ ಕಾಪಾಡಲು ಕಾಂಗ್ರೆಸ್ ಮುಖಂಡರಿಗೂ ಆಹ್ವಾನ ನೀಡಿದ್ದೇನೆ. ಗೊರೂರು ಜಲಾಶಯದಿಂದ ಜಿಲ್ಲೆಗೆ ೨೪.೫ಟಿಎಂಸಿ ಅಡಿ ನೀರು ಹಂಚಿಕೆಯಾಗಿದ್ದರೂ ಸರ‍್ಪಕವಾಗಿ ನೀರು ಬಂದಿಲ್ಲ, ಆದರೆ, ಶಿವಕುಮಾರ್ ನಮ್ಮ ಜಿಲ್ಲೆಯ ಪಾಲನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top