ಹಾಸನ/ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡೆಗಡೆಯಾಗಿರುವ ಶಾಸಕ ಎಚ್ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆ PSI ಅಜಯ್ ಅವರು ಇಂದು ಹರದನಹಳ್ಳಿ ಮನೆಯಲ್ಲಿ ರೇವಣ್ಣಗೆ ಹೈಕೋರ್ಟ್ ನ ನೊಟೀಸ್ ಮುಟ್ಟಿಸಿದ್ದು,ನೋಟಿಸ್ ತಲುಪಿದ ಐದು ದಿನದೊಳಗೆ ಹಾಜರಾಜಗಲು ಕೋರ್ಟ್ ನೋಟಿಸ್ನಲ್ಲಿ ತಿಳಿಸಿದೆ. ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಎಸ್ಐಟಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಇದೀಗ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ಮೈಸೂರಿನ ಕೆಆರ್ಪೇಟೆಯಲ್ಲಿ ದಾಖಲಾಗಿರುವ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಎಚ್ಡಿ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿತ್ತು. ಆದ್ರೆ, ರೇವಣ್ಣ ಅವರು ಕರ್ಟ್ನಿಂದ ಜಾಮೀನು ಪಡೆದುಕೊಂಡು ಜೈಲಿನಿಂದ ಆಚೆಬಂದಿದ್ದರು. ಆದ್ರೆ, ಇದೀಗ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಹೈಕರ್ಟ್ ರ್ಜಿ ಸಲ್ಲಿಸಿದ್ದಾರೆ. ಇದರಿಂದ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.
ಇನ್ನು ಇದೇ ಮಹಿಳೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಜಾಮೀನು ರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರ ಬಂಧನಕ್ಕೆ ಮುಂದಾಗಿದ್ದಾರೆ. ಆದ್ರೆ, ಇದನ್ನು ಅರಿತ ಭವಾನಿ ರೇವಣ್ಣ ಅವರು ತಲೆಮರಿಸಿಕೊಂಡಿದ್ದಾರೆ.