ಬೆಂಗಳೂರು : ಜನವರಿ , 10 : ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ. ಚಂಪಾ ಎಂದೇ ಪ್ರಸಿದ್ಧರಾದ, ಚಂದ್ರಶೇಖರ್ ಪಾಟೀಲ್ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ.

ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಸೇವೆ ಅನುಪಮವಾದುದು.ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ರೂಪಿಸಿದ್ದಲ್ಲದೆ ಅವುಗಳಲ್ಲಿ ಮುಂಚೂಣಿಯಾಗಿ ನಿಂತವರು, ಎಂದು ಸಚಿವರು ಸ್ಮರಿಸಿದ್ದಾರೆ. ಮೃತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು, ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.