ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪ್ರದಾನ

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವ ಜು.13 ರಂದು: ಕುಲಪತಿ ಸಿದ್ದು ಪಿ. ಸಿದ್ದು ಆಲಗೂರ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2021-22 ನೇ ಸಾಲಿನ 11ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವು ಜುಲೈ 13 ರಂದು ಬೆಳಗ್ಗೆ 10 ಕ್ಕೆ ವಿಶ್ವ ವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂರು ಜನ ಮಹನೀಯರಿಗೆ ಗೌರವ ಡಾಕ್ಟರೆಟ್ ಪ್ರದಾನ ಮಾಡಲಾಗುತ್ತಿದೆ ಎಂದು ಕುಲಪತಿ ಪೆÇ್ರ.ಸಿದ್ದು ಪಿ.ಆಲಗೂರ್ ಅವರು ತಿಳಿಸಿದರು. ವಿಶ್ವ ವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ಘಟಿಕೋತ್ಸವದಲ್ಲಿ ರಾಜ್ಯದ ಘನತೆವೆತ್ತ ರಾಜ್ಯಪಾಲರು ಹಾಗೂ ವಿಶ್ವ ವಿದ್ಯಾಲಯದ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್‍ನ ಅಧ್ಯಕ್ಷರಾದ ಡಾ.ಜೆ.ಕೆ.ಬಜಾಜ್ ಅವರು ಮಾಡಲಿದ್ದಾರೆ ಎಂದು ತಿಳಿಸಿದರು.

ಘಟಿಕೋತ್ಸದ ವಿಶೇಷತೆಗಳು: 3 ಜನರಿಗೆ ಗೌರವ ಡಾಕ್ಟರೇಟ್ ಪ್ರದಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕವಿತಾ ಮಿಶ್ರಾ, ಹಿರೇಹಾಳ್ ಇಬ್ರಾಹಿಂ, ಪಂಡಿತ ಎಂ.ವೆಂಕಟೇಶ್ ಕುಮಾರ್ ಸೇರಿ ಮೂರು ಮಹನೀಯರಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ ಎಂದು ಕುಲಪತಿ ಪೆÇ್ರ.ಸಿದ್ದು ಆಲಗೂರು ಅವರು ತಿಳಿಸಿದರು. ಈ ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 53 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ವಿವಿಧ ವಿಭಾಗಗಳ ಒಟ್ಟು 32 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಎಲ್ಲ ವಿಭಾಗಗಳ ಸ್ನಾತಕ ಪದವಿಯ 51 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 72 ಒಟ್ಟು 123 ವಿದ್ಯಾರ್ಥಿಗಳು ರ್ಯಾಂಕ್ ಪ್ರಮಾಣ ಪತ್ರಗಳನ್ನು ಪಡೆಯಲಿದ್ದಾರೆ. 03 ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳ ಪಟ್ಟಿ: ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಖನಿಜ ಸಂಸ್ಕರಣ ವಿಭಾಗದ ರುಬಾನ್.ಎಲ್, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಔದ್ಯೋಗಿಕ ರಸಾಯನ ಶಾಸ್ತ್ರ ವಿಭಾಗದ ಹಜಿರಾಜಿ.ಎ ಹಾಗೂ ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರದ ರುಷಬ್ ಕುಮಾರ್ ಮೆಹ್ತಾ ಇವರುಗಳು ಪಡೆದುಕೊಂಡಿದ್ದಾರೆ. 02 ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳ ಪಟ್ಟಿ: ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಕನ್ನಡ ವಿಭಾಗದ ಮೋಹನ್‍ಕುಮಾರ್ ಆರ್.ಜಿ,  ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸ್ವಾತಿ.ಎ, ಭೌತಶಾಸ್ತ್ರ ವಿಭಾಗದ ಕಾರ್ತಿಕ್ ರೆಡ್ಡಿ ಹೆಚ್.ಕೆ, ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಸಮಾಜಶಾಸ್ತ್ರದ ಸುಮಾ ಕಾಯಣ್ಣನವರ ಹಾಗೂ ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದ ಬಿಎಸ್‍ಸಿ ವಿಭಾಗದ ವಿಶಾಲಾಕ್ಷಿ ಇವರುಗಳು ಪಡೆದುಕೊಂಡಿದ್ದಾರೆ.

ಪರೀಕ್ಷಾ ಫಲಿತಾಂಶ: ವಿಶ್ವವಿದ್ಯಾಲಯದ ಸ್ನಾತಕ ಪದವಿಯಲ್ಲಿ ಒಟ್ಟು 12,423 ಸ್ನಾತಕ ಪದವಿ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಬರೆದು ತಮ್ಮ ಪದವಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 1,712ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ.

ಗೌರವ ಡಾಕ್ಟರೆಟ್ ಪಡೆದ ಮೂರು ಜನರ ಪರಿಚಯ ಇಂತಿದೆ:

ಕವಿತಾ ಮಿಶ್ರಾ(ಕೃಷಿ ಕ್ಷೇತ್ರ):

ಕವಿತಾ ಮಿಶ್ರಾ ಅವರು ಧಾರವಾಡದಲ್ಲಿ 1977 ರಲ್ಲಿ ಜನಿಸಿದರು. ಕೃಷಿ ಮತ್ತು ಕೃಷಿ ಆಧಾರಿತ ಉದ್ಯಮದಲ್ಲಿ ಮಹತ್ತರ ಸಾಧನೆಗೈದಿರುವ ಇವರು ಬಹು ಬೆಳೆ ಪದ್ಧತಿಯನ್ನು ಅಳವಡಿಸಿಕೊಂಡು ಆರ್ಥಿಕ ಮತ್ತು ಪರಿಸರ ಸ್ನೇಹಿ ವಿಚಾರಗಳನ್ನು ತಿಳಿದು ಅದನ್ನು ಕಾರ್ಯರೂಪಕ್ಕೆ ತರುವುದರ ಜೊತೆ-ಜೊತೆಗೆ ಹೈನುಗಾರಿಕೆ ಮತ್ತು ಕೃಷಿ ನರ್ಸರಿಯನ್ನು ಪ್ರಾರಂಭಿಸಿರುತ್ತಾರೆ. ಸುಸ್ಥಿರ ಕೃಷಿ ಪದ್ದತಿಯ ಕುರಿತು ಹಳ್ಳಿಗಳಲ್ಲಿ ಜಾಗೃತಿ ಮೂಡಿಸಿರುವ ಇವರಿಗೆ ಅತ್ಯುತ್ತಮ ರೈತ ಪ್ರಶಸ್ತಿ, ಗೋಲ್ಡ್ ಪ್ರಶಸ್ತಿ, ಅತ್ಯುತ್ತಮ ತೋಟಗಾರಿಕಾ ಪ್ರಶಸ್ತಿ, ಕೃಷಿ-ಋಷಿ ಪ್ರಶಸ್ತಿ, ರಾಣಿ ಚನ್ನಮ್ಮ ಪ್ರಶಸ್ತಿಯ ಜೊತೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿವೆ.

ದಿ.ಹಿರೇಹಾಳ್ ಇಬ್ರಾಹಿಂ(ಸಮಾಜ ಸೇವೆ):

ದಿ.ಹಿರೇಹಾಳ್ ಇಬ್ರಾಹೀಂ ಅವರು 1931 ರಲ್ಲಿ ದಂಡಿ ಹೀರೆಹಾಳ್ ಗ್ರಾಮದಲ್ಲಿ ಜನಿಸಿದರು. ಸಾಹಿತ್ಯ ಮತ್ತು ಧಾರ್ಮಿಕ ಸಾಮರಸ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಇವರು ವಿದ್ಯಾರ್ಥಿ ದೆಸೆಯಿಂದಲೇ ಸ್ವಾತಂತ್ರ್ಯ ಹೋರಾಟಗಾರು ಮತ್ತು ಸಾಹಿತಿಗಳ ಸಂಪರ್ಕಕ್ಕೆ ಬಂದು ಸಾಹಿತ್ಯ ಮತ್ತು ಸಂಸ್ಕøತಿ ಕುರಿತು ವಿಶೇಷ ಆಸಕ್ತಿಯನ್ನು ಬೆಳೆಸಿಕೊಂಡರು. ಶಿವಮೊಗ್ಗದಲ್ಲಿ ನಡೆದ 49ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಮತ್ತು ಸಾಂಸ್ಕøತಿಕ ಸಮಿತಿಯ ನೇತೃತ್ವ ವಹಿಸಿದ್ದರು. ಕರ್ನಾಟಕ ಸಂಘದ ಉಪಾಧ್ಯಕ್ಷರಾಗಿ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರು ಶಿವಮೊಗ್ಗದಲ್ಲಿ ‘ಜೀವನ ಸಂಜೆ’ ಎಂಬ ವೃದ್ಧಾಶ್ರಮ ಸ್ಥಾಪಿಸಿರುತ್ತಾರೆ. ಮುಸ್ಲಿಂ ಪ್ರವಚನಗಳನ್ನು ಕನ್ನಡಕ್ಕೆ ಅನುವಾದಿಸಿರುವ ಇಬ್ರಾಹೀಂ ಅವರು ಕೋಮು ಸಾಮರಸ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು.

ಪಂಡಿತ ಎಂ. ವೆಂಕಟೇಶ್ ಕುಮಾರ್(ಸಂಗೀತ ಕ್ಷೇತ್ರ):

ಹೆಸರಾಂತ ಹಿಂದೂಸ್ತಾನಿ ಗಾಯಕರಾದ ಪಂಡಿತ ಎಂ.ವೆಂಕಟೇಶ್ ಕುಮಾರ್ ಅವರು ಬಳ್ಳಾರಿ ಜಿಲ್ಲೆಯ ಲಕ್ಷ್ಮೀಪುರದಲ್ಲಿ 1953 ರಲ್ಲಿ ಜನಿಸಿದರು. ಇವರು ಪಂಡಿತ್ ಪುಟ್ಟರಾಜ್ ಗವಾಯಿಗಳ ಮಾರ್ಗದರ್ಶನದಲ್ಲಿ ಸಂಗೀತ ತರಬೇತಿ ಪಡೆದಿದ್ದಾರೆ. ಹಾಗೂ ಕರ್ನಾಟಕ ಕಾಲೇಜಿನ ಸಂಗೀತ ವಿಭಾಗದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ದಾಸರ ಪದಗಳು ಹಾಗೂ ವಚನಗಳ ಗಾಯನದ ಮೂಲಕ ಮನೆಮಾತಾಗಿರುವ ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಗೌರವ ಡಾಕ್ಟರೇಟ್ ಪದವಿ, ವಚನ ಸಾಹಿತ್ಯಶ್ರೀ ಪ್ರಶಸ್ತಿ ಮತ್ತು 2016ರಲ್ಲಿ ಭಾರತ ಸರ್ಕಾರವು “ಪದ್ಮ ಶ್ರೀ” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಘಟಿಕೋತ್ಸವದಲ್ಲಿ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು, ಎಲ್ಲ ನಿಕಾಯದ ಡೀನರು, ಮುಖ್ಯಸ್ಥರುಗಳು, ಸಂಯೋಜಕರುಗಳು, ವಿವಿಧ ಮಹಾವಿದ್ಯಾಲಯಗಳ ಪಾಂಶುಪಾಲರಾಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕುಲಪತಿಗಳಾದ ಪೆÇ್ರ.ಸಿದ್ದು ಪಿ.ಆಲಗೂರ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕುಲಸಚಿವರಾದ ಪ್ರೊ.ಎಸ್.ಸಿ.ಪಾಟೀಲ್, ಕುಲಸಚಿವ (ಮೌಲ್ಯಮಾಪನ) ಪ್ರೊ.ರಮೇಶ್ ಓಲೇಕಾರ ಇದ್ದರು.

ಹೊಸ ಕಟ್ಟಡಗಳ ಉದ್ಘಾಟನಾ ಸಮಾರಂಭ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ಡ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಸೇರಿದಂತೆ ಹೊಸ ಕಟ್ಟಡಗಳ ಉದ್ಘಾಟನಾ ಸಮಾರಂಭವು ಇದೇ ದಿನದಂದು (ಜುಲೈ 13 ರಂದು) ಬೆಳಗ್ಗೆ 10 ಕ್ಕೆ ವಿಶ್ವ ವಿದ್ಯಾಲಯದ ಮುಖ್ಯ ಆವರಣದಲ್ಲಿ ನಡೆಯಲಿದೆ ಎಂದು ಕುಲಪತಿಗಳಾದ ಪೆÇ್ರ.ಸಿದ್ದು ಪಿ.ಆಲಗೂರ ಅವರು ತಿಳಿಸಿದರು. ರಾಜ್ಯದ ರಾಜ್ಯಪಾಲರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‍ಚಂದ್ ಗೆಹ್ಲೋಟ್ ಅವರು ಉದ್ಘಾಟಿಸುವರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ, ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್, ಲೋಕಸಭಾ ಸದಸ್ಯರಾದ ದೇವೆಂದ್ರಪ್ಪ ಅವರು ಘನ ಉಪಸ್ಥಿತಿ ಇರುವರು.

ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಸಿದ್ದು ಪಿ.ಅಲಗೂರು ಅವರು ಅಧ್ಯಕ್ಷತೆ ವಹಿಸುವರು.

ಕುಲಸಚಿವರಾದ ಪ್ರೊ.ಎಸ್.ಸಿ.ಪಾಟೀಲ್, ಕುಲಸಚಿವರಾದ(ಮೌಲ್ಯಮಾಪನ) ಪ್ರೋ.ರಮೇಶ್ ಓ.ಓಲೇಕಾರ್, ವಿತ್ತಾಧಿಕಾರಿಗಳಾದ ಖಾಜಾ ಮೈನುದ್ದೀನ್.ಎಂ.ಡಿ ಸೇರಿದಂತೆ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ ಸದಸ್ಯರು ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.

Facebook
Twitter
LinkedIn
WhatsApp
Telegram

Leave a Comment

Your email address will not be published. Required fields are marked *

Translate »
Scroll to Top