ವಿಜಯನಗರ: ಹೋಳಿ ಹಬ್ಬ ಮತ್ತು ಷಬ್-ಎ-ಬರಾತ್ ಹಿನ್ನೆಲೆ ಮಾ.19ರವರೆಗೆ ಮದ್ಯದ ಅಂಗಡಿಗಳು ಬಂದ್

ಜಿಲ್ಲಾಧಿಕಾರಿ ಅನಿರುದ್ಧ್ ಪಿ.ಶ್ರವಣ್
ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಹೋಳಿ ಹಬ್ಬ ಮತ್ತು ಷಬ್-ಎ-ಬರಾತ್ ಹಿನ್ನೆಲೆಯಲ್ಲಿ ಮಾ.16ರ ರಾತ್ರಿ 10ರಿಂದ ಮಾ.19ರ ಬೆಳಗ್ಗೆ 6ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಹೋಳಿ ಮತ್ತು ಷಬ್-ಎ-ಬರಾತ್ ಹಬ್ಬಗಳನ್ನು ಆಚರಿಸುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮತ್ತು ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಮದ್ಯದ ಅಂಗಡಿ, ಬಾರ್, ರೆಸ್ಟೋರೆಂಟ್ ಮತ್ತು ಇತರ ಸ್ಥಳಗಳಲ್ಲಿ ಮದ್ಯ ಮಾರಾಟ ಮಾಡದಂತೆ ಮತ್ತು ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ನಿμÉೀಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ಈ ಆದೇಶವನ್ನು ಅನುಷ್ಠಾನಕ್ಕೆ ತರಲು ಅಬಕಾರಿ ಇಲಾಖೆಯ ಉಪ ಆಯುಕ್ತರು ಹಾಗೂ ಜಿಲ್ಲಾ ಪೆÇಲೀಸ್ ಅಧೀಕ್ಷಕರು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top