ವಿಜಯನಗರ ಕ್ರೀಡಾಂಗಣ,ವೃತ್ತಕ್ಕೆ ಪುನೀತ್ ರಾಜಕುಮಾರ್ ಹೆಸರು ಅನುಮೋದನೆ

ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.09(ಕರ್ನಾಟಕ ವಾರ್ತೆ): ಹೊಸಪೇಟೆ ನಗರಸಭೆಯ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷರಾದ ಸುಂಕಮ್ಮ ಅವರ ಅಧುಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ಜರುಗಿತು. ಸಭೆಯಲ್ಲಿ ವಿವಿಧ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆದವು.
ನಗರದ ತಹಸೀಲ್ದಾರ ಕಚೇರಿ ಬಳಿಯ ನಾಲ್ಕು ಕೂಡುರಸ್ತೆಯ ವೃತ್ತಕ್ಕೆ ಹಾಗೂ ಜಿಲ್ಲಾ ಕ್ರೀಡಾಂಗಣಕ್ಕೆ ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಹೆಸರು ನಾಮಕರಣ ಮಾಡುವುದಕ್ಕೆ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ಒಪ್ಪಿಗೆ ನೀಡಲಾಯಿತು.


ಇದೇ ಸಂದರ್ಭದಲ್ಲಿ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ಸಹ ನಾಮನಿರ್ದೇಶನ ಮಾಡಲಾಯಿತು.
ಸಭೆಯಲ್ಲಿ ಹೊಸಪೇಟೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಪ್ಲಾಟ್‍ಫಾರಂ ಅನ್ನು ನಿರ್ಮಾಣ ಮಾಡಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ನಗರದ ಯುಜಿಡಿ ಮತ್ತು ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗಳ ಕುರಿತು ಆದಷ್ಟು ಬೇಗನೆ ಕಾಮಗಾರಿ ಮುಗಿಸಲು ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರು ಸೂಚನೆ ನೀಡಿದರು. ಪ್ರತಿಯೊಂದು ವಾರ್ಡ್‍ಗಳ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲು ಅಧ್ಯಕ್ಷರಿಗೆ ಸದ್ಯಸರುಗಳು ಮನವಿಯನ್ನು ಇದೇ ಸಂದರ್ಭದಲ್ಲಿ ಸಲ್ಲಿಸಿದರು. ಸಭೆಯಲ್ಲಿ ಯುಜಿಡಿ,ಸ್ವಚ್ಛತೆ,ಪೌರಕಾರ್ಮಿಕರ ಸಮಸ್ಯೆಗಳು ಪ್ರತಿಧ್ವನಿಸಿದವು ವಿವಿಧ ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದವು.
ಈ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷರಾದ ಆನಂದ್ ಮತ್ತು ನಗರ ಸಭೆಯ ಪೌರಯುಕ್ತರರಾದ ಮನ್ಸೂರ್‍ಅಲಿ ಹಾಗೂ ನಗರಸಭೆಯ ಸದಸ್ಯರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top