ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನ ಬಿಸಿ ಗಾಳಿ ಬೀಸುವ ಸಾಧ್ಯತೆ ಕಾರಣ ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಸಲಹೆ ನೀಡಿದೆ.
ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೀದರ್, ವಿಜಯನಗರ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾವೇರಿ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ವರದಿ ತಿಳಿಸಿದೆ. ಇದೇ ೩೦ ರಿಂದ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಇಲಾಖೆ ವರದಿ ತಿಳಿಸಿದೆ.
Facebook
Twitter
LinkedIn
Telegram
WhatsApp
Email
Print