ನಾನು ನಾಸ್ತಿಕನಲ್ಲ-ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ

ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ನುಡಿದರು. 

ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡು ಮಾತನಾಡಿದರು.

 

ನಾನು ನಾಸ್ತಿಕನಲ್ಲ-ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆಪೂಜಿಸುತ್ತೇವೆ ಎಂದರು. 

ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲಾ ಸಕುಟುಂಬಸ್ಥರು ಎಂದು ವಿವರಿಸಿದರು.

ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ ಎಂದು ವಿವರಿಸಿದರು.

ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಕೊಟ್ಟರು. ದೇವರು ನಮ್ಮ ಆತ್ಮ ಮತ್ತು ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣನವರು ನುಡಿದರು.  ದೇಹವೇ ದೇಗುಲ ಎನ್ನುವ ಸಂದೇಶವನ್ನು ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ ಎಂದು ವಚನಗಳನ್ನು ಉದಾಹರಿಸಿದರು.

 

ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಎನ್ನುತ್ತಾ ತಾವೂ ಜೈ ಶ್ರೀರಾಮ್ ಘೋಷಣೆ ಕೂಗಿ ನೆರೆದಿದ್ದ ಸಾರ್ವಜನಿಕರಿಗೂ ಘೋಷಣೆ ಕೂಗಿಸಿದರು. 

ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಎಂಬ ಅಪಪ್ರಚಾರವನ್ನು ಖಂಡಿಸುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀ ರಾಮ ಟೆಂಪಲ್ ಟ್ರಸ್ಟ್  ವತಿಯಿಂದ ಆಯೋಜಿಸಿದ್ದ ಶ್ರೀ ಸೀತಾ, ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಳಾ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

 

ರಾಮಮಂದಿರವನ್ನು ರಾಜಕೀಯಗೊಳಿಸಬಾರದು. ಶ್ರೀರಾಮಚಂದ್ರ ಎಲ್ಲರ ದೇವರು . ಕೇವಲ ಬಿಜೆಪಿಯವರ ದೇವರಲ್ಲ. ಎಲ್ಲಾ ಹಿಂದೂಗಳ ದೇವರು. ನಾವೂ ಶ್ರೀರಾಮಚಂದ್ರನ ಭಕ್ತರೇ. ಶ್ರೀರಾಮಚಂದ್ರನಿಗೆ ವಿರುದ್ಧವಾಗಿದ್ದೇವೆ ಎಂದು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ  ಮಾಡುತ್ತಿದೆ. ಈ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು.

ದೇವಸ್ಥಾನ ಉದ್ಘಾಟನೆ: ರಾಜಕೀಯ ಇಲ್ಲ

 

ಇಂದು ಶ್ರೀ ರಾಮ ಟೆಂಪಲ್ ಟ್ರಸ್ಟ್  ವತಿಯಿಂದ ಆಯೋಜಿಸಿದ್ದ  ಶ್ರೀರಾಮ ದೇವಸ್ಥಾನವನ್ನು ಇದರೊಂದಿಗೆ ಆಂಜನೇಯ ವಿಗ್ರಹವನ್ನೂ ಉದ್ಘಾಟಿಸಿದ್ದೇನೆ. ಇದನ್ನು ನಾವು  ರಾಜಕಾರಣಕ್ಕಾಗಿ ಮಾಡಿರುವುದಲ್ಲ. ಕರ್ನಾಟಕ ರಾಜ್ಯದಲ್ಲಿ ಶ್ರೀರಾಮಚಂದ್ರನ ಬಹಳಷ್ಟು ದೇವಸ್ಥಾನಗಳಿವೆ. ನಮ್ಮೂರಿನಲ್ಲಿಯೂ ನಾನೇ ಶ್ರೀರಾಮಚಂದ್ರನ ದೇವಸ್ಥಾನವನ್ನು ಕಟ್ಟಿಸಿದ್ದೇನೆ. ಇದರಲ್ಲಿ ರಾಜಕೀಯ ಇಲ್ಲ. ಸಮಯ ದೊರೆತಾಗ ಅಯೋಧ್ಯೆಗೆ ನಾನು ಹೋಗುತ್ತೇನೆ. ಶ್ರೀರಾಮಚಂದ್ರನ ಮೂರ್ತಿ ಎಲ್ಲೆಡೆ ಒಂದೇ. ಅಯೋಧ್ಯೆಯಲ್ಲಿ  ಮಾಡಿದರೂ ಒಂದೇ, ನಮ್ಮೂರಿನಲ್ಲಿ ಪೂಜೆ ಮಾಡಿದರೂ ಒಂದೇ. ಬಿಜೆಪಿಯವರು ಅಯೋಧ್ಯೆಯಲ್ಲಿ. ರಾಮನನ್ನು ಮಾತ್ರ ಪ್ರತಿಷ್ಠಾಪಿಸಿದ್ದಾರೆ. ರಾಮ,ಆಂಜನೇಯ, ಸೀತೆ ಲಕ್ಷ್ಮಣನನ್ನು ಬೇರ್ಪಡಿಸಲಾಗುವುದಿಲ್ಲ. ಶ್ರೀರಾಮಚಂದ್ರ ಒಬ್ಬನೇ ಇರದೇ ಸೀತಾದೇವಿ, ಲಕ್ಷ್ಮಣ, ಆಂಜನೇಯ ಇದ್ದಾಗ ಮಾತ್ರ ಪರಿಪೂರ್ಣವಾಗುತ್ತದೆ. ಇವರು ಶ್ರೀರಾಮಚಂದ್ರನನ್ನೇ ಬೇರ್ಪಡೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಸರಿ ಇಲ್ಲ ಎಂದು ಅಭಿಪ್ರಾಯಪಟ್ಟರು.

ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ

ಮಹಾತ್ಮಾಗಾಂಧಿಜಿ ರಘುಪತಿ ರಾಘವ ರಾಜಾರಾಮ್ ಎಂದು ಭಜಿಸುತ್ತಿದ್ದು, ಸಾಯುವಾಗಲೂ ಹೇ ರಾಮ್ ಎಂದೇ ಜೀವ ಬಿಟ್ಟರು. ಕಾಂಗ್ರೆಸ್ ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತದೆ. ಬಿಜೆಪಿ ಹೇಳಿದ ರಾಮನನ್ನು ಅಲ್ಲ ಎಂದರು. 

ಅನೇಕ ರಾಜ್ಯಗಳು ರಜೆ ಘೋಷಿಸಿಲ್ಲ

ಕರ್ನಾಟಕದಲ್ಲಿ ಕಾರ್ಯಕ್ರಮದ ಅಂಗವಾಗಿ ರಜೆ ಗೋಷಣೆ ಮಾಡಿಲ್ಲ ಎಂಬಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕೇಂದ್ರ ಸರ್ಕಾರ ಅರ್ಧ ದಿನ ರಜೆ ಕೊಟ್ಟಿದ್ದಾರೆ. ದೆಹಲಿ, ಪಂಜಾಬ್, ತೆಲಂಗಾಣ, ಪಶ್ಚಿಮ ಬಂಗಾಲ, ತಮಿಳುನಾಡು,ಕೇರಳದಲ್ಲಿಯೂ ರಜೆ ಕೊಟ್ಟಿಲ್ಲ ಎಂದರು.

ಪಿ ಎಸ್ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪನವರ ಅಧ್ಯಕ್ಷತೆಯ ಏಕಸದಸ್ಯ ಆಯೋಗ ತನಿಖೆ ಮಾಡಿ ಇಂದು ವರದಿಯನ್ನು ಸಲ್ಲಿಸಿದ್ದಾರೆ, ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 

ಸಚಿವರಾದ ಬೈರತಿ ಸುರೇಶ್, ಈಶ್ವರ್ ಖಂಡ್ರೆ, ಆಯೋಗದ ಉಪಾಧ್ಯಕ್ಷರಾದ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜುಶಾಸಕರಾದ ಮಂಜುಳಾ ಅರವಿಂದ ಲಿಂಬಾವಳಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಅರವಿಂದ ಲಿಂಬಾವಳಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top