ಕ್ರಮ ಕೈಗೊಳ್ಳದಿದ್ದರೆ ಡ್ರಗ್ಸ್ ಮಾಫಿಯಾದಲ್ಲಿ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ: ಪ್ರಲ್ಹಾದ್ ಜೋಶಿ

ಬೆಂಗಳೂರು: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ರ‍್ಕಾರ ಮಾದಕ ದ್ರವ್ಯ ದಂಧೆ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳದಿದ್ದರೆ, ರಾಜ್ಯವು ಡ್ರಗ್ಸ್ ಹಾವಳಿಯಲ್ಲಿ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ, ಬೆಂಗಳೂರು, ಮಂಗಳೂರು ಭಾಗದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿದ್ದು, ಈ ನಿಟ್ಟಿನಲ್ಲಿ ಸಾಕಷ್ಟು ಪುರಾವೆಗಳನ್ನು ಒದಗಿಸುತ್ತಿದೆ ಎಂದರು.

ಡ್ರಗ್ಸ್ ದಂಧೆ ಪ್ರಕರಣಗಳನ್ನು ನಿಭಾಯಿಸುವಲ್ಲಿ ರಾಜ್ಯ ರ‍್ಕಾರ ಸಂಪರ‍್ಣ ನರ‍್ಲಕ್ಷ್ಯ ತೋರುತ್ತಿದೆ. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ತಲೆ ಎತ್ತುತ್ತಿದೆ. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಅವಕಾಶ ನೀಡಬಾರದು. ಯುವಕರು ಮತ್ತು ವಿದ್ಯರ‍್ಥಿಗಳ ಹಿತದೃಷ್ಟಿಯಿಂದ ರ‍್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

ಈಮಧ್ಯೆ, ಪ್ರತಿಪಕ್ಷ ನಾಯಕ ಆರ್ ಅಶೋಕ ಮಾತನಾಡಿ, ಶಾಂತಿ, ಕಾನೂನು ಸುವ್ಯವಸ್ಥೆಗೆ ಹೆಸರಾದ ರ‍್ನಾಟಕ ರೌಡಿ ರಾಜ್ಯವಾಗಿ ಮರ‍್ಪಟ್ಟಿದೆ ಎಂದರು.

ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಹಾಗೂ ಉಡುಪಿಯಲ್ಲಿ ನಡೆದ ಗ್ಯಾಂಗ್ ವಾರ್ ಘಟನೆಗಳನ್ನು ಪ್ರಸ್ತಾಪಿಸಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಭಯೋತ್ಪಾದಕರು, ರೌಡಿಶೀಟರ್‌ಗಳು, ಹಂತಕರು ಯಾವುದೇ ಭಯವಿಲ್ಲದೆ ಬಹಿರಂಗವಾಗಿ ಶಾಂತಿ ಕದಡುತ್ತಿದ್ದಾರೆ ಎಂದು ದೂರಿದರು.

 

‘ಸಿಎಂ ಸಿದ್ದರಾಮಯ್ಯ ಅವರೇ, ರಾಜ್ಯದಲ್ಲಿ ಸರಣಿ ಕೊಲೆಗಳು, ಅತ್ಯಾಚಾರ, ಗ್ಯಾಂಗ್ ವಾರ್, ಡ್ರಗ್ಸ್ ಮಾಫಿಯಾ ಚಟುವಟಿಕೆಗಳು, ರೇವ್ ಪರ‍್ಟಿಗಳು, ಕೋಮು ರ‍್ಷಣೆಗಳು, ಹಿಂಸಾಚಾರಗಳು ರಾಜ್ಯಕ್ಕೆ ಕಳಂಕ ತರುತ್ತಿವೆ. ಶಾಂತಿ ಕಾಪಾಡಲು ನಿಮಗೆ ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಮತ್ತು ರ‍್ನಾಟಕದ ಜನರು ಶಾಂತಿಯಿಂದ ಬದುಕಲು ಬಿಡಿ’ ಎಂದು ಹೇಳಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top