ಹೊಳಗುಂದಿಯಲ್ಲಿ ಪೆಟ್ರೋಲಿಯಂ ರಿಟೈಲ್ ಜೌಟಲೇಟ್ ಸ್ಥಾಪನೆಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ

ಹೊಸಪೇಟೆ, ವಿಜಯನಗರ ಜಿಲ್ಲೆ: ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ಇಟ್ಟಗಿ ಹೋಬಳಿಯ ಹೊಳಗುಂದಿ ಗ್ರಾಮದ ಸರ್ವೇ ನಂಬರ್ 750/*/ಎ ರಲ್ಲಿ ಕಲಬುರಗಿಯ ಟೆರ್ರಿಟರಿ ಮ್ಯಾನೇಜರ್ ರಿಟೈಲ್ ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್, ಇವರು ಪೆಟ್ರೋಲಿಯಂ ರಿಟೈಲ್ ಜೌಟಲೇಟ್ ಸ್ಥಾಪನೆ ಮಾಡಲು ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್.ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪೆಟ್ರೋಲಿಯಂ ರಿಟೈಲ್ ಜೌಟಲೇಟ್ ಸ್ಥಾಪನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳು ಇದ್ದಲ್ಲಿ ಒಂದು ವಾರದೊಳಗಾಗಿ ಆಕ್ಷೇಪಣೆಯನ್ನು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ದೂ.08394-295655 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top