ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ವಿಶ್ವ ಮಾದಕವಸ್ತು ವಿರೋಧಿ ದಿನ ದ ಅಂಗವಾಗಿ ಬೃಹತ್ ಕಾಲ್ನಡಿಗೆ ಜಾಗೃತಿ ಜಾಥಾ ಕಾರ್ಯಕ್ರಮನ್ನ ಅಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಉಪಮುಖ್ಯ ಮಂತ್ರಿ ಡಿಕೆ.ಶಿವಕುಮಾರ್ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಪರಿಶಿಷ್ಟ ಪಂಗಡ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮದಲ್ಲಿ ಸೇರಿದ್ದ ಸಾವಿರಾರು ವಿದ್ಯಾರ್ಥಿಗಳ ಕುರಿತು ಮಾತನಾಡಿದರು.
ರಾಜ್ಯವನ್ನ ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿ ಮಾಡಲು ಪಣತೊಟ್ಟಿದ್ದೇವೆ. ಈ ಕುರಿತು ಈಗಾಗಲೇ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಜೊತೆ ಚರ್ಚಿಸಲಾಗಿದೆ. ವಿದ್ಯಾರ್ಥಿಗಳಾದ ತಾವು ಮಾದಕ ವಸ್ತು ವ್ಯೆಸನಿಗಳನ್ನ ದೂರದೆ ಪ್ರೀತಿಯಿಂದ ಕಾಣುವುದರ ಜೊತೆ ಅವರ ಮನ ಪರಿವರ್ತನೆ ಗೆ ಶ್ರಮಿಸಬೇಕು.
ಈಗಾಗಲೆ ಯುವ ಸಬಲೀಕರಣ ಇಲಾಖೆಯಿಂದಲೂ ಕೂಡ ಮಾದಕ ವ್ಯೆಸನಿಗಳನ್ನ ಗುರ್ತಿಸಿ ಕೌನ್ಸಿಲಿಂಗ್ ಮೂಲಕ ಚಿಕಿತ್ಸೆ ನೀಡಲು ತಿಳಿಸಿದ್ದು ಇಲಾಖೆ ಕಾರ್ಯೋನ್ಮುಖವಾಗಿದೆ. ಸರ್ಕಾರ ಎಲ್ಲಾ ಹಂತದಲ್ಲೂ ಮಾದಕ ವಸ್ತು ಮಾರಾಟಕ್ಕೆ ಕಡಿವಾಣ ಹಾಕಲು ಸಜ್ಜಾಗಿದ್ದು ಮಾದಕ ವಸ್ತು ಮಾರಾಟ ಮಾಡುವವರ ಮೇಲೆ ನಿರ್ಧಾಕ್ಷಣ್ಯ ಕ್ರಮ ಜರುಗಿಸಲಿದೆ. ಇನ್ನೂ ಮಾದಕ ವಸ್ತು ಮಾರಾಟದ ಸುಳಿವು ಸಿಕ್ಕಲ್ಲಿ ವಿದ್ಯಾರ್ಥಿಗಳು ಸಹಾಯವಾಣಿಗೆ ಕರೆ ಮಾಡಬೇಕು ಹಾಗೆ ಸುಳಿವು ನೀಡಿದ ವ್ಯಕ್ತಿಗಳ ಮಾಹಿತಿ ಗೌಪ್ಯವಾಗಿಡಲಾಗುವುದೆಂದ ಸಚಿವರು ವಿಧ್ಯಾರ್ಥಿಗಳ ಜೊತೆ ಪ್ರತಿಜ್ಙಾವಿಧಿ ಸ್ವೀಕರಿಸಿದರು.
ಯುವಜನರು ಕ್ಷಣಿಕ ಸುಖಕ್ಕಾಗಿ ಸೇವಿಸುವ ಮಾದಕ ವಸ್ತುಗಳು ಆರೋಗ್ಯ ಹಾಳು ಮಾಡುವ ಜತೆಗೆ ಸಮಾಜದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತವೆ. ಆದ್ದರಿಂದ ಯಾರು ಕೂಡ ಮಾದಕ ವಸ್ತುಗಳ ಸೇವನೆಯ ಬಲೆಗೆ ಬೀಳಬಾರದು. ಮಾದಕ ವಸ್ತುಗಳ ಚಟ ಒಮ್ಮೆ ಅಂಟಿಕೊಂಡರೆ ಬಿಡುವುದು ಕಷ್ಟ. ನಿರಂತರ ಸೇವನೆಯಿಂದ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಮಾದಕ ಸೇವನೆಗಳಿಂದ ಶರೀರ ಬಲಹೀನಗೊಳ್ಳುತ್ತದೆ. ವ್ಯಕ್ತಿಯ ಮೇಲೆ ಭಾವನಾತ್ಮಕ, ದೈಹಿಕ ಮತ್ತು ಮಾನಸಿಕವಾಗಿ ಪ್ರಭಾವ ಬೀರುತ್ತದೆ. ಆದ್ದರಿಂದ ಯಾರೂ ಮಾದಕ ಪದಾರ್ಥಗಳನ್ನು ಸೇವಿಸಬಾರದು’ ಎಂದು ಸಚಿವ ಬಿ.ನಾಗೇಂದ್ರ ಅವರು ಹೇಳಿದರು.
ನಂತರ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದಿಂದ ವಿದ್ಯಾರ್ಥಿಗಳ ಜೊತೆ ಕಂಠೀರವ ಕ್ರೀಡಾಂಗಣದವರೆಗೆ ಜಾಗೃತಿ ಜಾಥಾದಲ್ಲಿ ಹೆಜ್ಜೆ ಹಾಕಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎಂ.ಎಲ್.ಸಿ ನಾಗರಾಜ್ ಯಾದವ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ನಾಡೋಜ ಡಾ. ವೂಡೇ ಪಿ. ಕೃಷ್ಣ, ಕ್ಯಾನ್ಸರ್ ತಜ್ಞ ವಿಶಾಲ್ ರಾವ್, ಎನ್.ಎಸ್.ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ ಉಪಸ್ಥಿತರಿದ್ದರು.