ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ: ಜಿ ಪರಮೇಶ್ವರ್​

ಬೆಂಗಳೂರು: ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಪ್ರತಿಪಕ್ಷಗಳು ಮತ್ತು ಸ್ವಪಕ್ಷದ ನಾಯಕರು ರ‍್ಕಾರದ ವಿರುದ್ಧ ಆರೋಪ ಮಾಡುತ್ತಿರುವ ನಡುವೆ, ಹುಬ್ಬಳ್ಳಿ ಅಂಜಲಿ ಅಂಬಿಗೇರ (೨೦) ಹತ್ಯೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ ಎಂದು ಸ್ವತಃ ಗೃಹ ಸಚಿವ ಜಿ ಪರಮೇಶ್ವರ್ ಒಪ್ಪಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರ‍್ತವ್ಯ ಲೋಪದಡಿ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಮಹಿಳಾ ಹೆಡ್ಕಾನ್ಸ್ಟೇಬಲ್ ಅವರನ್ನು ಅಮಾನತುಗೊಳಿಸಲಾಗಿದೆ. ನನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಅಂತ ಕೊಲೆಯಾದ ಅಂಜಲಿ ಅಜ್ಜಿ ಪೊಲೀಸರಿಗೆ ದೂರು ಕೊಟ್ಟಿರಲಿಲ್ಲ, ಕೇವಲ ಮಾಹಿತಿ ನೀಡಿದ್ದರು. ಅಂಜಲಿ ಪೋಷಕರು, ಪೊಲೀಸರಿಗೆ ಮೊದಲೆ ಮಾಹಿತಿ ನೀಡಿದ್ದೇವು ಅಂತ ಅಂದಿದ್ದಾರೆ. ಸದ್ಯ ಕೊಲೆ ಆರೋಪಿ ವಿಶ್ವನನ್ನು ಪೊಲೀಸರು ಬಂಧಿಸಿದ್ದಾರೆ, ಯಾವುದೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಎಸ್ಐಟಿ ವರದಿ ಮಂಡ್ಯ ಶಾಸಕರಿಗೆ ಸಿಗುತ್ತೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯಿಸಿ, ಪ್ರಕರಣ ಇನ್ನೂ ತನಿಖೆ ಆಗುತ್ತಿದೆ. ಅನೇಕ ವಿಚಾರವನ್ನು ಸರ‍್ವಜನಿಕಗೊಳಿಸುವಂತಿಲ್ಲ. ಮಂಡ್ಯ ಶಾಸಕರಿಗೆ ಯಾರು ಮಾಹಿತಿ ನೀಡುತ್ತಾರೆ? ಆರೋಪ ಸುಲಭ, ಆದರೆ ನಾವು ಯಾವ ಮುಲಾಜಿಗೆ ಒಳಪಡಲ್ಲ. ಎಸ್ಟಿಐ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ. ನಮಗೆ, ಸಿಎಂಗೆ ಯಾವ ಮಾಹಿತಿ ಕೊಡಬೇಕು ಕೊಡುತ್ತಾರೆ ಎಂದು ಹೇಳಿದರು.

 

ಹಾಸನ ಸಂಸದ ಪ್ರಜ್ವಲ್‌ನನ್ನು ವಿದೇಶದಿಂದ ಕರೆ ತರುವ ವಿಚಾರವಾಗಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣರನ್ನು ಕರೆತರುವ ಕೆಲಸ ನಡೆಯುತ್ತಿದೆ, ಅದು ನಿಲ್ಲಲ್ಲ. ಸಂಸದ ಪ್ರಜ್ವಲ್ರನ್ನು ಕರೆತಂದು ಕಾನೂನು ಕ್ರಮ ಕೈಗೊಳ್ಳುತ್ತೇವೆ. ರ‍್ಕಾರ ಒಳ್ಳೆ ಕೆಲಸ ಮಾಡ್ತಿದೆ ಅಂತಾ ವಿಪಕ್ಷದವರು ಹೇಳುವುದಿಲ್ಲ ಎಂದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top