ಬಳ್ಳಾರಿ,ಫೆ ,20 : ನಗರದ ಬತ್ರಿ ಗ್ರಾಮದಲ್ಲಿ ಸುಮಾರು ದಿನಗಳಿಂದ ಒಳಚರಂಡಿ ಕಾಮಗಾರಿ ತಟಸ್ಥವಾದ ವಿಷಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರ ಗಮನಕ್ಕೆ ಬಂದ ತಕ್ಷಣ ಇಂದು ಬೆಳಗಿನ ಜಾವ ಬತ್ರಿ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಇದೇ ವೇಳೆ ನಗರದ ಆರೋಗ್ಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ನಗರದ ಸ್ವಚ್ಛತೆ ಹೆಚ್ಚಿನ ಗಮನ ನೀಡಲು ಸೂಚಿಸಲಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.