ವಸತಿ ನಿಲಯಗಳ ಸ್ಥಾಪನೆಗೆ ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ ಸುವರ್ಣಸೌಧ,ಡಿ.೧೫ : ಹಿಂದುಳಿದ ವರ್ಗಗಗಳ ಹಾಗೂ ಪರಿಶಿಷ್ಟ ಜಾತಿ ಮತು ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳ ವಸತಿ ನಿಲಯಗಳ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ, ಪ್ರಾದೇಶಿ ಕೇಂದ್ರಗಳಲ್ಲಿ ಹೆಚ್ಚುವರಿ ಸೌಲಭ್ಯ ಕಲ್ಪಿಸಲು ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಎಲ್.ನಾಗೇಂದ್ರ ಅವರ ಪ್ರಶ್ನೆಗೆ ಪೂರಕವಾಗಿ ಉತ್ತರಿಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ವಸತಿ ನಿಲಯಗಳ ಕೊರತೆಯಿಂದ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಕೇಂದ್ರಗಳಲ್ಲಿರುವ ವಸತಿ ನಿಲಯಗಳಲಿ ಸೌಲಭ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಂಬಂಧಪಟ್ಟ ಇಲಾಖೆಗಳ ವಿಶೇಷ
ಸಭೆಯನ್ನು ಕರೆದು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳಲು ಪ್ರಯತ್ನಿಸಲಾಗುವುದು. ಇದಕ್ಕಾಗಿ ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.


ಆದಾಯ ಹೆಚ್ಚಿಸಲು ಕ್ರಮ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಲು ಸರ್ಕಾರ ಈಗಾಗಲೇ ಶ್ರೀನಿವಾಸ ಮೂರ್ತಿ ಅವರ ಏಕಸದಸ್ಯ ಸಮಿತಿಯನ್ನು ರಚಿಸಿದೆ. ಸಮಿತಿಯ ಶಿಫಾರಸ್ಸಿನ ಆಧಾರದಲ್ಲಿ, ಸಾರ್ವಜನಿಕರಿಗೆ ಹೊರೆಯಾಗದಂತೆ ಸಂಸ್ಥೆಯನ್ನು ಲಾಭದಾಯಕವಾಗಿಸುವ
ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಅವರು ಶಾಸಕ ಶರತ್ಬ ಚ್ಚೇಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದರು.
ಸಂಚಾರ ಮಿತಿ ಹೆಚ್ಚಳ ಪರಿಶೀಲನೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ವಿದ್ಯಾರ್ಥಿಗಳ ಬಸ್‌ಪಾಸ್ಸಂ ಚಾರ ಮಿತಿಯನ್ನು ೧೦೦ಕಿಮೀಗೆ ಏರಿಸುವ ಬಗ್ಗೆ ಪರಿಶೀಲಿಸುವುದಾಗಿ ಸಚಿವ ಶ್ರೀರಾಮುಲು ಅವರು ತಿಳಿಸಿದರು. ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಾಲಿ ಇರುವ ೬೦ಕಿಮೀ ಮಿತಿಯಿಂದ ೧೦೦ಕಿಮೀಗೆ ಹೆಚ್ಚಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಶಾಲಾ ಕಾಲೇಜುಗಳು ಪ್ರಾರಂಭವಾಗಿರುವುದರಿಂದ ಶೈಕ್ಷಣಿಕ ದಾಖಲೆಗಳನ್ನು ಒದಗಿಸಿ ಸೇವಾಸಿಂಧು ಮೂಲಕ ಕೂಡಾ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು. ಹಳೆ ಬಸ್‌ಗಳ ಅನುಪಯುಕ್ತಗೊಳಿಸಲು ಕ್ರಮ: ಕೇಂದ್ರ ಸರ್ಕಾರದ ನೀತಿಯ ಪ್ರಕಾರ ೧೫ ವರ್ಷ ಪೂರೈಸಿದ ಅಥವಾ ೯ಲಕ್ಷ ಕಿಮೀ ಕ್ರಮಿಸಿದ ಸಂಸ್ಥೆಯ ಎಲ್ಲಾ ಬಸ್‌ಗಳನ್ನು ಅನುಪಯುಕ್ತಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

Leave a Comment

Your email address will not be published. Required fields are marked *

Translate »
Scroll to Top