2023-24ನೇ ಸಾಲಿನಲ್ಲಿ ಶೇ. 83 ರಷ್ಟು ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶೂ ಮತ್ತು ಸಾಕ್ಸ್‌ಗಳ ವಿತರಣೆ

ಬೆಂಗಳೂರು : ರಾಜ್ಯದಲ್ಲಿ ೧ ರಿಂದ ೧೦ನೇ ತರಗತಿಯ ಎಲ್ಲ ಸರ್ಕಾರಿ ಶಾಲಾ ಮಕ್ಕಳಿಗೆ ೨೦೨೩-೨೪ನೇ ಸಾಲಿನಲ್ಲಿ ಶೇ. ೮೩ ರಷ್ಟು ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶೂ ಮತ್ತು ಸಾಕ್ಸ್‌ಗಳನ್ನು ವಿತರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನಪರಿಷತ್‌ನಲ್ಲಿಂದು ಹೇಳಿದರು. ಇನ್ನುಳಿದ ಶೇ. ೧೭ರಷ್ಟು ಸಮವಸ್ತ್ರ ಮತ್ತು ಶೂ, ಸಾಕ್ಸ್‌ಗಳನ್ನು ಈ ತಿಂಗಳಾಂತ್ಯದೊಳಗೆ ಪೂರೈಕೆ ಮಾಡಲಾಗುವುದು ಎಂದರು.

ಮಂಜುನಾಥ್ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳ ಶೂ, ಸಾಕ್ಸ್ ಖರೀದಿಗೆ ಈಗಾಗಲೇ ೧೨೫ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ವಿದ್ಯಾ ವಿಕಾಸ ಯೋಜನೆಯಡಿ ೧ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮುದ್ರಿಸಿ ಶಾಲೆಗಳಿಗೆ ಸರಬರಾಜು ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿರುವ ೧೩ ಸಾವಿರ ಶಿಕ್ಷಕರ ಹುದ್ದೆ ಸಂಬಂಧದ ಅಡೆತಡೆಗಳನ್ನು ನಿಭಾಯಿಸಿ ಅವರನ್ನು ಭರ್ತಿ ಮಾಡಿಕೊಳ್ಳಲಾಗುವುದು. ಇದರ ಜತೆಗೆ ಸಂಗೀತ, ಚಿತ್ರಕಲೆ ಸೇರಿದಂತೆ ವಿಶೇಷ ಶಿಕ್ಷಕರ ನೇಮಕಕ್ಕೂ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ರಾಜ್ಯದ ಸರ್ಕಾರಿ ಪ್ರೌಢಶಾಲೆಯಲ್ಲಿ ೬ ಅಥವಾ ೬ಕ್ಕಿಂತ ಹೆಚ್ಚು ವಿಭಾಗವರುವ ಶಾಲೆಗಳಿಗೆ ವಿಶೇಷ ಶಿಕ್ಷಕರ ಹುದ್ದೆಯನ್ನು ಮಂಜೂರು ಮಾಡಲಾಗಿದೆ. ಅದರಂತೆ ರಾಜ್ಯದಲ್ಲಿ ೨೩೨೮ ಹುದ್ದೆಗಳು ಮಂಜೂರಾಗಿದ್ದು, ೧೨೫೩ ಮಂದಿ ವಿಶೇಷ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನೂ ೧೦೭೫ ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Facebook
Twitter
LinkedIn
WhatsApp
Telegram

Leave a Comment

Your email address will not be published. Required fields are marked *

Translate »
Scroll to Top