ಬೆಂಗಳೂರು,ಫೆ,12 : ರಾಜ್ಯದ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಅಶ್ವತ್ಥನಾರಾಯಣ ಸಿ.ಎನ್. ಅವರು ಶನಿವಾರ ಕಲಬುರಗಿಯ ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಏರ್ಪಡಿಸಲಾದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ್ ತೇಲ್ಕೂರ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ, ವಿಧಾನ ಪರಿಷತ್ ಸದಸ್ಯರಾದ ಡಾ. ಬಿ.ಜಿ. ಪಾಟೀಲ್, ಶಶಿಲ್ ನಮೋಶಿ, ಎಚ್.ಕೆ.ಇ ಶಿಕ್ಷಣ ಸಂಸ್ಥೆ ಅಧ್ಯಕ್ಷ ಭೀಮಾಶಂಕರ ಸಿ. ಬಿಲಗುಂದಿ, ಕೂಡಾ ಅಧ್ಯಕ್ಷ ದಯಾಘನ್ ಧಾರವಾಡಕರ್, ಕಲಬುರಗಿ ಜಿಲ್ಲಾ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂತಾದವರು ಭಾಗವಹಿಸಿದ್ದರು.