ಇಂದಿರಾಗಾಂಧಿ ಬಡವರಿಗೆ ಬದುಕು ಕಲ್ಪಿಸಿಕೊಟ್ಟ ದಿಟ್ಟ ಧೈರ್ಯವಂತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇಂದಿರಾಗಾಂಧಿ ಅವರಂಥಾ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂದಿರಾಗಾಂಧಿ ಅವರಂಥಾ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

 

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 39 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಇಂಧಿರಾಗಾಂಧಿ ಅತ್ಯಂತ ಧೈರ್ಯವಂತ ಮಹಿಳೆ. ದೇಶದ ಬಡವರ ಆರಾಧ್ಯ ದೈವ ಆಗಿದ್ದರು ಎಂದು ಮೆಚ್ಚುಗೆ ಸೂಚಿಸಿದರು.

ಮಹಾತ್ಮಗಾಂಧಿ ಹತ್ಯೆ, ಇಂದಿರಾಗಾಂಧಿ ಹತ್ಯೆ, ರಾಜೀವ್ ಗಾಂಧಿ ಹತ್ಯೆ ದೇಶಕ್ಕೆ ಆದ ದೊಡ್ಡ ನಷ್ಟ. ಈ ಮೂವರು ದೇಶಕ್ಕಾಗಿ ಹುತಾತ್ಮರಾದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ಇವರು ದೇಶಕ್ಕಾಗಿ ಮಾಡಿದ ತ್ಯಾಗ, ಬಲಿದಾನ ನಮ್ಮ ದೇಶದ ಮಣ್ಣಿನಲ್ಲಿ ದಾಖಲಾಗಿದೆ ಎಂದರು.

 

ಬಿಜೆಪಿಯವರಿಗೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಚರಿತ್ರೆ ಇಲ್ಲ. ಕೇವಲ ಖಾಲಿ ದೇಶಭಕ್ತಿ ಬಗ್ಗೆ ಭಾಷಣ ಮಾಡುತ್ತಾರೆ. ಖಾಲಿ ಭಾಷಣಗಳಿಂದ ದೇಶಕ್ಕೆ, ದೇಶದ ಜನರಿಗೆ ಏನೂ ಸಿಗುವುದಿಲ್ಲ ಎಂದು ಟೀಕಿಸಿದರು. 

ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಇವರ ಕೊಡುಗೆ ಅಪಾರ ಎಂದು ಅವರ ಹೋರಾಟದ ಘಟನೆಗಳನ್ನು ಸ್ಮರಿಸಿದರು.

 

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ಮುಖಂಡರು ವೇದಿಕೆಯಲ್ಲಿದ್ದರು.

ಬಿಜೆಪಿ ಯವರು ಹೇಳಿದ ಕೂಡಲೇ ಸರ್ಕಾರ ಬಿದ್ದುಹೋಗುವುದಿಲ್ಲ

 

ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮದೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರು ಹೇಳಿದ ಕೂಡಲೇ ಸರ್ಕಾರ ಬಿದ್ದುಹೋಗುವುದಿಲ್ಲ.  ನಮ್ಮ ಸರ್ಕಾರ ಧೃಢವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top