ಇಂದು ಗಂಗಾವತಿಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಗಂಗಾವತಿ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ “ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ” ಪಾಲ್ಗೊಂಡರು.
ಗಂಗಾವತಿ ನಗರದ ಸರ್ಕಾರಿ ಪದವಿ ಪೂರ್ವ (ಜೂನಿಯರ್) ಕಾಲೇಜು ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಾರತದ ಸಂವಿಧಾನ ಪೀಠಿಕೆಯ ವಾಚನವನ್ನು ಸಹಸ್ರಾರು ವಿದ್ಯಾರ್ಥಿಗಳು ಸೇರಿ ಎಲ್ಲರೂ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಕಳೆದ 2020ರಲ್ಲಿ ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರರಾವ್ ಸರ್ಕಾರಿ ಮಹಾವಿದ್ಯಾಲಯದಲ್ಲಿ ಜನವರಿ 26ರಂದು ಸಂವಿಧಾನ ಪೀಠಿಕೆಯನ್ನು ಕಂಠದಾನ ಮಾಡಿ ಹೇಳಿಸಲಾಗಿತ್ತು. ಇದು ಸಮಸ್ತ ಗಂಗಾವತಿಗೆ ಹೆಮ್ಮೆಯ ವಿಷಯವಾಗಿದೆ.
ಕಳೆದ ಎರಡು ದಿನಗಳಿಂದ ರಾಜ್ಯ ಮತ್ತು ಜಿಲ್ಲಾಮಟ್ಟದ ದಿನಪತ್ರಿಕೆಗಳು, ಟಿವಿ ವಾಹಿನಿಗಳು, ಯೂಟ್ಯೂಬ್ ಚಾನೆಲ್ ಗಳಲ್ಲಿ 2020ರ ಗಂಗಾವತಿಯಲ್ಲಿ ಸಂವಿಧಾನ ಪೀಠಿಕೆ ಓದುವ ಅಭಿಯಾನ ನಡೆಸಿರುವ ಕುರಿತು ವರದಿಗಳು ಪ್ರಕಟವಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ.

ಕಾರ್ಯಕ್ರಮದಲ್ಲಿ ತಹಶೀಲ್ದಾರರಾದ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೆಂಕಟೇಶ ರಾಮಚಂದ್ರಪ್ಪ , ಸಹಾಯಕ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆಯ ಶರಣಪ್ಪ ಚವಾಣ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಯಾದ ಉಷಾ ಕಲ್ಮನಿ,ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ದೇವಿ, ನಗರಸಭೆಯ ಆಯುಕ್ತರಾದ ವಿರೂಪಾಕ್ಷ ಮೂರ್ತಿ, ಪೊಲೀಸ್ ವೃತ್ತ ನಿರೀಕ್ಷಕರಾದ ಅಡಿವೆಪ್ಪ ಅವರು ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು, ಅನೇಕ ಸಂಘಟನೆಯ ಕಾರ್ಯಕರ್ತರು, ಪ್ರಾಧ್ಯಾಪಕರು, ಸಾವಿರಾರು ಸಂಖ್ಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
