ಬಳ್ಳಾರಿಯಲ್ಲಿ ಅಂತರಾಷ್ಟ್ರೀಯ ಎಂಎಸ್‌ಎಂಇ ದಿನಾಚರಣೆ

ಬಳ್ಳಾರಿ: ಭಾರತ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಪರಿಷತ್ತಿನ ಬಳ್ಳಾರಿ ಶಾಖೆ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಹಯೋಗದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಪುಟ್ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂಎಸ್‌ಎಂಇ) ಅಂತಾರಾಷ್ಟ್ರೀಯ ದಿನಾಚರಣೆಯ ಕಾರ್ಯಕ್ರಮವನ್ನು ಯುವಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾಣಿಜ್ಯ ಮತ್ತು ವಹಿವಾಟು ಕ್ಷೇತ್ರದಲ್ಲಿ ದೇಶದ ಅಭಿವೃದ್ಧಿಗೆ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯು ತನ್ನದೇ ಆದ ವಿಶಿಷ್ಟ ಪಾತ್ರ ಹೊಂದಿದೆ. ಕೃಷಿ ಕ್ಷೇತ್ರ ಮತ್ತು ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯು ಭಾಗಿತ್ವ ಹೊಂದಿದರೆ ರೈತರ ಆದಾಯ ವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.         

 

          ಭಾರತೀಯ ಚಾರ್ಟೆಡ್ ಅಕೌಂಟೆಂಟ್ ಸಂಸ್ಥೆಯ ಈ ಕಾರ್ಯಕ್ರಮವನ್ನು ಶ್ಲಾಘಿಸುತ್ತಾ ಮುಂದಿನ ದಿನಗಳಲ್ಲಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳು ಸಮರ್ಪಕ ಅನುಷ್ಠಾನಕ್ಕೆ ಸಹಕಾರ ನೀಡುವಂತೆ ಸಲಹೆ ನೀಡಿದರು.

ಬಳ್ಳಾರಿ ಜಿಲ್ಲಾ ಕೈಗಾರಿಕೋದ್ಯಮ ಮತ್ತು ವಾಣಿಜ್ಯ ಸಂಘದ ಸದಸ್ಯರು ಈ ದಿಶೆಯಲ್ಲಿ ಸಹಕಾರ ನೀಡಬೇಕು. ರಾಜ್ಯದ ಹಾಗೂ ದೇಶದ ಬೊಕ್ಕಸಕ್ಕೆ ತೆರಿಗೆ ಸಂಗ್ರಹಿಸುವಲ್ಲಿ ಚಾರ್ಟರ್ಡ್ ಅಕೌಂಟೆಂಟ್ಗಳ ಪಾತ್ರ ಬಹಳ ಮಹತ್ತರವಾದದ್ದು ಮತ್ತು ಅವರು ದೇಶದ ಅಭಿವೃದ್ಧಿಯ ಪಾಲುದಾರರು ಎಂದು ಶ್ಲಾಘಿಸಿದರು.

     ಸರಕಾರ ಹೊಸ ಯೋಜನೆ ಜಾರಿಗೆ ತಂದಂತಹ ಸಂದರ್ಭದಲ್ಲಿ ಕೆಲವೊಂದು ನ್ಯೂನತೆಗಳು ಮತ್ತು ಅಡಚಣೆಗಳನ್ನು ಇರುತ್ತವೆ. ಅದನ್ನು ಸರಿಪಡಿಸುವುದಕ್ಕೆ ಕಾಲಾವಕಾಶ ನೀಡಬೇಕೆಂದರು.

 

          ಅಂತರಾಷ್ಟ್ರೀಯ ಎಂಎಸ್‌ಎಮ್‌ಇ ದಿನಾಚರಣೆಯ ಬಗ್ಗೆ ಹೆಚ್ಚು ಜನರಿಗೆ ತಿಳಿದೇ ಇರಲಿಲ್ಲ ಈ ಕಾರ್ಯಕ್ರಮದ ಮೂಲಕ ಕೈಗಾರಿಕೋದ್ಯಮಿಗಳು ಹಾಗೂ ಕೃಷಿಕರಿಗೆ ಕೈಗಾರಿಕೋದ್ಯಮಗಳಿಂದ ಆಗುವ ಅನುಕೂಲತೆಗಳ ಬಗ್ಗೆ ತಿಳಿಸಿಕೊಡುವ ಮಹತ್ತರವಾದ ಕೆಲಸವನ್ನು ಮಾಡುತ್ತಿರುವುದಕ್ಕೆ ಧನ್ಯವಾದ ಹೇಳಿದರು.

ರಾಜ್ಯ ಸರ್ಕಾರದ ಕೃಷಿ ಇಲಾಖೆಯಿಂದ ಕೃಷಿಕರಿಗೆ ನೀಡುವ ಅನೇಕ ಸೌಲಭ್ಯಗಳ ಬಗ್ಗೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಆರ್.ಪಾಲಾಕ್ಷಗೌಡ ವಿವರಿಸಿದರು. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಬಗ್ಗೆ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಆಡಿ ಶಿಲ್ಪ.ಹೆಚ್ ಅವರು ವಿವರವಾಗಿ ವಿವರಿಸಿದರು.

              ಕಲ್ಯಾಣ ಕರ್ನಾಟಕದ ಕೃಷಿಕರಿಗೆ ವಿಶೇಷವಾಗಿ ಬಳ್ಳಾರಿ ಜಿಲ್ಲೆಯ ರೈತರಿಗೆ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ಇರುವ ಅವಕಾಶಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು.

 

                ಈ ಸಂದರ್ಭದಲ್ಲಿ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ್, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಜಾನಕಿ, ಬಿಡಿಸಿಸಿ ಅಧ್ಯಕ್ಷ ಸಿ.ಶ್ರೀನಿವಾಸ್ ರಾವ್, ಬಿಡಿಸಿಸಿ ಕಾರ್ಯದರ್ಶಿ ಯಶವಂತ್ ರಾಜ್ ನಾಗಿರೆಡ್ಡಿ, ಪ್ರಾಂತೀಯ ಪರಿಷತ್ತಿನ ಅಧ್ಯಕ್ಷ ನಾಗನಗೌಡ, ಕಾರ್ಯದರ್ಶಿ ಪುರುಷೋತ್ತಮ ರೆಡ್ಡಿ ಸೇರಿದಂತೆ ವರ್ತಕರು ವಿದ್ಯಾರ್ಥಿಗಳು, ರೈತರು ಹಾಗೂ ಇತರರು ಉಪಸ್ಥಿತರಿದ್ದರು.

Facebook
Twitter
LinkedIn
WhatsApp
Email
Telegram

Leave a Comment

Your email address will not be published. Required fields are marked *

Translate »
Scroll to Top