ಪೀಠಾರೋಹಣ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ಪತ್ರ

ಬೆಂಗಳೂರು,ಫೆಬ್ರವರಿ,1 : ವೀರಶೈವ ಲಿಂಗಾಯತ ಪಂಚಮಸಾಲಿ ಮಠಾಧೀಶರುಗಳ ಒಕ್ಕೂಟದ ನಾನಾ ಸ್ವಾಮೀಜಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಆಶೀರ್ವದಿಸಿ, ಫೆ. 13 ರಂದು ನಡೆಯಲಿರುವ ಬಾಗಲಕೋಟ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ನೂತನ ಜಗದ್ಗುರು ಶ್ರೀ ಡಾ. ಮಹದೇವ ಶಿವಾಚಾರ್ಯ ಸ್ವಾಮೀಜಿ ಅವರ ಪೀಠಾರೋಹಣ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ಪತ್ರ ನೀಡಿದರು.

ವಿಜಯಪುರ ಮನಗೂಳಿ ಹಿರೇಮಠದ ಶ್ರೀ ಅಭಿನವ ಸಂಗನ ಬಸವ ಶಿವಾಚಾರ್ಯ ಸ್ವಾಮೀಜಿ, ಬೆಳಗಾವಿ ಬೆಂಡವಾಡ ವಿರಕ್ತ ಮಠದ ಶ್ರೀ ಗುರುಸಿದ್ಧ ಸ್ವಾಮೀಜಿ, ಬಾಗಲಕೋಟೆ ಹುಂಚನೂರ್ ಕಮರಿಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಬೆಂಗಳೂರಿನ ಶ್ರೀ ಸಿದ್ಧಾರೂಢ ಆಶ್ರಮದ ಶ್ರೀ ಡಾ. ಆರೂಢ ಭಾರತೀ ಸ್ವಾಮೀಜಿಗಳು ಮತ್ತಿತರರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top