ಬಾಯಿಗೆ ಬಟ್ಟೆ ತುರುಕಿ ನೀರಾವರಿ ಇಲಾಖೆ ಇಂಜಿನಿಯರ್ ಪತ್ನಿಯ ಕೊಲೆ

ಶಿವಮೊಗ್ಗ: ನೀರಾವರಿ‌ ಇಲಾಖೆಯ ಇಂಜಿನಿಯರ್ ಪತ್ನಿಯನ್ನು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ವಿಜಯನಗರದಲ್ಲಿ ಬೆಳಕಿಗೆ ಬಂದಿದೆ.

ವಿಜಯನಗರದ ಕಮಲಮ್ಮ(57) ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದರು.  ಕಮಲಮ್ಮ ಮನೆಯಲ್ಲಿ ಒಬ್ಬರೆ ಇರುವುದನ್ನು ಗಮನಿಸಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

 

ಕಮಲಮ್ಮ ಅವರ ಪತಿ ಚಿತ್ರದುರ್ಗದಲ್ಲಿ ನೀರಾವರಿ ಇಲಾಖೆಯಲ್ಲಿ ಇಂಜಿನಿಯರ್ ಆಗಿದ್ದು, ಪುತ್ರ ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದಾನೆ. ಕಮ್ಮಲಮ್ಮ ಒಬ್ಬರೇ ಮನೆಯಲ್ಲಿ ಇದ್ದರು.

ರಾತ್ರಿ ಪತಿ ಮತ್ತು ಪುತ್ರ ಇಬ್ಬರೂ ಕಮಲಮ್ಮ ಅವರಿಗೆ ಪೋನ್ ಮಾಡಿದ್ದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಶನಿವಾರ ಸಂಜೆಯೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಕಮಲಮ್ಮ ಅವರು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಅವರು ಪರಿಚಯಸ್ಥರು ಮತ್ತು ನೆರೆಹೊರೆಯವರಿಗೆ ಕರೆ ಮಾಡಿ ಮನೆಯ ಬಳಿ ನೋಡಿಕೊಂಡು ಬರಲು ತಿಳಿಸಿದ್ದಾರೆ.

 

ಮನೆಯಲ್ಲಿ ಸಂಪೂರ್ಣ ಮೌನ ಆವರಿಸಿತ್ತು. ಅನುಮಾನಗೊಂಡು ಮನೆ ಬಾಗಿಲು ತೆರೆದು ನೋಡಿದಾಗ ಅಡುಗೆ ಕೋಣೆಯಲ್ಲಿ ಕಮಲಮ್ಮ ಅವರ ಮೃತದೇಹ ಪತ್ತೆಯಾಗಿದೆ. ಬಾಯಿಗೆ ಬಟ್ಟೆ ತುರುಕಿದ್ದು ಹಂತಕರು ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

Facebook
Twitter
LinkedIn
Pinterest
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top