ರೈಲ್ವೆ ಸಚಿವರ ರಾಜೀನಾಮೆಗೆ ಆಗ್ರಹಿಸುವುದು ಸರಿಯಲ್ಲ: ಹೆಚ್‌ಡಿಡಿ

ಬೆಂಗಳೂರು: ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಬಳಿಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಹೇಳಿದ್ದಾರೆ.

ಮಂಗಳವಾರ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ರೈಲು ದುರಂತ ಸಂಭವಿಸಿದ ಬಳಿಕ ಅಲ್ಲಿನ ಪರಿಸ್ಥತಿಯನ್ನು ಸಹಜಸ್ಥಿತಿಗೆ ತರಲು ಅಶ್ವಿನಿ ವೈಷ್ಣವ್ ಅವರು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಅವರು ನಿರಂತರವಾಗಿ ಕೆಲಸ ಮಾಡುತ್ತಿದ್ದು, ಈ ಹಂತದಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸುವುದು ಸರಿಯಲ್ಲ ಎಂದರು.

 

2024ರ ಚುನಾವಣೆಗೆ ವಿರೋಧ ಪಕ್ಷಗಳು ಒಗ್ಗೂಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾವು ಯಾವುದೇ ಚರ್ಚೆಯನ್ನು ಮಾಡಿಲ್ಲ. ಮೊದಲನೆಯದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ನಾವು ಬಯಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ಜೂನ್ 2ರಂದು ಒಡಿಶಾದ ಬಾಲಸೋರ್‌ನಲ್ಲಿ ತ್ರಿವಳಿ ರೈಲುಗಳು ಏಕಕಾಲಕ್ಕೆ ಡಿಕ್ಕಿಯಾದ ಪರಿಣಾಮ ಭಾರೀ ಪ್ರಮಾಣದ ನಷ್ಟವುಂಟಾಗಿದೆ. ಈ ಘಟನೆಯಲ್ಲಿ 288 ಮಂದಿ ಸಾವನ್ನಪ್ಪಿದ್ದು, 1,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರೈಲು ದುರಂತದ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ.

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top