‘ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್’ : ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು: ‘ದೂರದ ದೇಶದಿಂದ ನೇರ ಇಲ್ಲಿಗೆ ಬಂದೆ. ಭಾರತದ ಸೂರ್ಯೋದಯವಾಗುತ್ತಿರುವ ಈ ಹೊತ್ತಿನಲ್ಲಿ ಆ ಬೆಳಕಿನಲ್ಲಿ ನಾನು ಬೆಂಗಳೂರಿಗರ ಮುಖ ನೋಡಿದೆ. ನಮ್ಮ ದೇಶದ ವಿಜ್ಞಾನಿಗಳ ಸಾಧನೆಯಿಂದ ಬಹಳ ಸಂತಸವಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.

ಚಂದ್ರಯಾನ-3ರ ಯಶಸ್ಸಿಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಇಸ್ರೋದ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಬಂದ ಅವರು, ಹೆಚ್ಎಎಲ್ ಏರ್ಪೋರ್ಟ್ ಹೊರಭಾಗದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದರು.

 

ಮೋದಿ ಅವರು ಮಾತನಾಡು ಆರಂಭಿಸುತ್ತಿದ್ದಂತೆಯೇ, ಅಭಿಮಾನಿಗಳು ‘ಜೈ ಮೋದಿ’ ಘೋಷಣೆ ಕೂಗಲು ಮುಂದಾದರು. ತಕ್ಷಣವೇ ಅದನ್ನು ತಡೆದ ಮೋದಿ, ‘ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್’ ಎಂಬ ಘೋಷಣೆ ಕೂಗುವಂತೆ ಮನವಿ ಮಾಡಿದರು.

ನಮ್ಮ ದೇಶದ ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋಗೆ ಭೇಟಿ ನೀಡಲು ನಿರ್ಧರಿಸಿದ್ದೆ. ಹಾಗಾಗಿ ವಿದೇಶದಿಂದ ನೇರವಾಗಿ ವಿಜ್ಞಾನಿಗಳ ಭೇಟಿಗಾಗಿ ಇಲ್ಲಿಗೆ ಬಂದಿದ್ದೇನೆ. ಇಸ್ರೋ ಕಚೇರಿಗೆ ತೆರಳಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದರು.

ಸಿಎಂ, ಡಿಸಿಎಂ, ರಾಜ್ಯಪಾಲರಿಗೆ ಧನ್ಯವಾದ

 

ವಿದೇಶದಲ್ಲಿರುವಾಗ ಅಲ್ಲಿಂದ ನೇರ ಬೆಂಗಳೂರಿಗೆ ಬರಲು ನಿರ್ಧರಿಸಿದೆ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರಿಗೆ ನಾನು ಮನವಿ ಮಾಡಿದ್ದೆ. ಅದಕ್ಕೆ ಇಷ್ಟೊಂದು ಕಡಿಮೆ ಅವಧಿಯಲ್ಲಿ ಪ್ರೋಟೋಕಾಲ್ ವ್ಯವಸ್ಥೆ ಮಾಡಿದ ಅವರಿಗೆ ಧನ್ಯವಾದ ಸಮರ್ಪಿಸುತ್ತಿದ್ದೇನೆ ಎಂದು ಮೋದಿ ಹೇಳಿದರು. ನಂತರ ಇಸ್ರೋ ಪ್ರಧಾನ ಕಚೇರಿಯತ್ತ ನಿರ್ಗಮಿಸಿದರು.

ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ

ಚಂದ್ರಯಾನ-3 ಯಶಸ್ಸಿನ ಹಿನ್ನೆಲೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ಪೀಣ್ಯದ ಇಸ್ರೋ ಕೇಂದ್ರಕ್ಕೆ ಆಗಮಿಸಿದ ಮೋದಿ ಅವರಿಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಯು.ಆರ್.ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ.ಶಂಕರನ್, ಇಸ್ಟ್ರಾಕ್ ನಿರ್ದೇಶಕ ಬಿ.ಎನ್.ರಾಮಕೃಷ್ಣ ಸ್ವಾಗತಿಸಿದರು.

ಚಂದ್ರಯಾನ-3 ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.

 

HAL ಏರ್ಪೋರ್ಟ್ನಲ್ಲಿ ಪ್ರಧಾನಿ ಮೋದಿ ಹಿರಿಯ ಅಧಿಕಾರಿಗಳು ಸ್ವಾಗತ ಕೋರಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.‌ದಯಾನಂದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ರಿಂದ ಸ್ವಾಗತಿಸಿದರು.

ಜಾಲಹಳ್ಳಿ ಕ್ರಾಸ್ ಬಳಿ ಸಾವಿರಾರು ಕಾರ್ಯಕರ್ತರು ಮೋದಿಗಾಗಿ ಸೇರಿದ್ದರು. ವೀರಗಾಸೆ, ಡೊಳ್ಳು ಕುಣಿತ ಮೂಲಕ ಮೋದಿ ಅವರನ್ನು ಸ್ವಾಗತಿಸಲಾಯಿತು.

ಹೆಚ್ಎಎಲ್ ಏರ್ಪೋರ್ಟ್ ಬಳಿ ಪ್ರಧಾನಮಂತ್ರಿ ಮೋದಿ ಭಾಷಣ ಮಾಡಿದರು. ಈ ವೇಳೆ ಜೈಜವಾನ್, ಕೈ ಕಿಸಾನ್, ಜೈ ವಿಜ್ಞಾನ ಎಂದು ಭಾಷಣ ಆರಂಭಿಸಿದರು. ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ ಎಂದರು. ನಂತರ ಪೀಣ್ಯದ ಬಳಿಯ ಇಸ್ರೋ ಕೇಂದ್ರಕ್ಕೆ ಭೇಟಿಕೊಟ್ಟ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು.

 

ಚಂದ್ರಯಾನ-3 ಯೋಜನೆ, ಪ್ರಜ್ಞಾನ್ ರೋವರ್ ಕಾರ್ಯನಿರ್ವಹಣೆ, ಅನ್ವೇಷಣೆ ಬಗ್ಗೆ ಇಸ್ರೋ ವಿಜ್ಞಾನಿಗಳು ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದರು. ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದು ಇಸ್ರೋ ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ವಿಜ್ಞಾನಿಗಳ ಜೊತೆ 45 ನಿಮಿಷಗಳ ಕಾಲ ಸಂವಾದ ನಡೆಸಲಿದ್ದಾರೆ.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top