ಬಳ್ಳಾರಿ: ಅವೈಜ್ಞಾನಿಕವಾಗಿ ಬಸ್ ಪ್ರಯಾಣ ದರವನ್ನು 15% ಏರಿಕೆ ಮಾಡಿರುವುದನ್ನು ಜನತಾದಳ (ಜಾತ್ಯಾತೀತ) ಪಕ್ಷವು ಖಂಡಿಸುತ್ತದೆ, ರಾಜ್ಯ ಸರ್ಕಾರ ಈ ಕೂಡಲೇ ಬಸ್ ದರ ಹೆಚ್ಚಳವನ್ನು ಹಿಂಪಡೆಯಬೇಕು ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ಒತ್ತಾಯಿಸಿದ್ದಾರೆ…ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಬಸ್ ದರ ಹೆಚ್ಚಳ ಖಂಡಿಸಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಅವರಿಗೆ ಮನವಿ ಸಲ್ಲಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು
ರಾಜ್ಯ ಸರ್ಕಾರ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಜನಸಾಮಾನ್ಯರ ಮೇಲೆ ದರ ಹೆಚ್ಚಳದ ಹೊರೆ ಹೊರಿಸಿದೆ. ಸುಭದ್ರವಾಗಿದ್ದ ಕರ್ನಾಟಕದ ಆರ್ಥಿಕತೆಯನ್ನು ಹದಗೆಡೆಸಿರುವ ಸರ್ಕಾರ, ಸಾರಿಗೆ ಪ್ರಯಾಣ ದರವನ್ನು ಶೇ.15% ಹೆಚ್ಚಳ ಮಾಡಿ ಈಗ ಜನಸಾಮಾನ್ಯರ ಮೇಲೆ ಅನಗತ್ಯವಾಗಿ ಬೆಲೆ ಏರಿಕೆಯ ಬರೆ ಹಾಕುತ್ತಿದೆ.
ಗ್ಯಾರಂಟಿ ಯೋಜನೆಗಳಿಂದ ಸಾರಿಗೆ ಸಂಸ್ಥೆ ದಿವಾಳಿಯಾಗಿದ್ದು, ಈಗಾಗಲೇ ರಾಜ್ಯ ಪಾರಿಗೆ ಸಂಸ್ಥೆಗೆ 2,000 ಕೋಟಿ ಸಾಲ ಪಡೆಯಲು ಸಚಿವ ಸಂಪುಣಿ ಅನುಮೋದನೆ ನೀಡಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ,ಅದರ ನಷ್ಟವನ್ನು ಸರಿದೂಗಿಸಲು ದರ ಹೆಚ್ಚಿಸಿ ಪುರುಷ ಪ್ರಯಾಣಿಕರಿಂದ ವಸೂಲಿ ಮಾಡಲಾಗುತ್ತಿದೆ. ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ.ರಾಜ್ಯ ಸರ್ಕಾರದ ಈ ತೀರ್ಮಾನ ಜನವಿರೋಧಿ ಮತ್ತು ಬಡವರ ವಿರೋಧಿ ಕ್ರಮವಾಗಿದೆ. ಬಸ್ ದರ ಏರಿಕೆಯನ್ನು ಜನತಾದಳ (ಜಾತ್ಯಾತೀತ) ಪಕ್ಷವು ಖಂಡಿಸುತ್ತದೆ.ಈ ಕೂಡಲೇ ರಾಜ್ಯ ಸರ್ಕಾರ ಅವೈಜ್ಞಾನಿಕ ಬಸ್ ಪ್ರಯಾಣ ದರ ಏರಿಕೆಯನ್ನು ವಾಪಾಸ್ ಪಡೆಯಬೇಕೆಂದು ಬಳ್ಳಾರಿ ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ವತಿಯಿಂದ ಜಿಲ್ಲಾಧ್ಯಕ್ಷರು ಆಗ್ರಹಿಸುತ್ತಾರೆ ಎಂದರು..
ಈ ಸಂದರ್ಭದಲ್ಲಿ ಮುಖಂಡರಾದ ರಾಜು ನಾಯ್ಕ್, ಲಕ್ಷ್ಮಿ ಕಾಂತ್ ರೆಡ್ಡಿ, ಕುರೆಕುಪ್ಪ ಸೋಮಪ್ಪ, ಹೊನ್ಞುರ ಸ್ವಾಮಿ, ಮಧುರೆ ವಿಜಯ್ , ರಾಮಾಂಜನೇಯಲು, ಕಿರಣ್ ಕುಮಾರ್, ನೀಲಾ, ಜಮೀಲಾ, ಮುತ್ತು, ಸೇರಿದಂತೆ ಮತ್ತಿತರರು ಇದ್ದರು